ಸಾಹಿತ್ಯ ಸಮ್ಮೇಳನ: ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

0

ಗೂನಡ್ಕದಲ್ಲಿ ನಡೆದ ಸುಳ್ಯ ತಾಲೂಕು 26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಬಹುಮಾನ ವಿತರಿಸಲಾಯಿತು.

ಸಮ್ಮೇಳನಾಧ್ಯಕ್ಷ ಕೆ.ಆರ್.ಗಂಗಾಧರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಶ್ರೀನಾಥ್ ಎಂ.ಪಿ., ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ಸ್ವಾಗತ ಸಮಿತಿ ಅಧ್ಯಕ್ಷ ಡಾ. ಉಮ್ಮರ್ ಬೀಜದಕಟ್ಟೆ ಉಪಸ್ಥಿತರಿದ್ದರು.

ಹನುಮಂತಪ್ಪ ಜಿ. ಬಹುಮಾನಿತರ ಪಟ್ಟಿ ವಾಚಿಸಿದರು. ಕೇಶವ ಸಿ. ಎ.‌ಕಾರ್ಯಕ್ರಮ ನಿರೂಪಿಸಿದರು.