ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ” ಕ್ರೀಡಾ ರಶ್ಮಿ”

0

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ” ಕ್ರೀಡಾ ರಶ್ಮಿ” ಇತ್ತೀಚೆಗೆ ನಡೆಯಿತು.
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ರೆ.ಫಾ.ಡಾ.ಆಂಟಿನಿ ಪ್ರಕಾಶ್ ಮೊಂತೆರೋರವರು ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿ ಶಿಕ್ಷಣ ಕಲಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವದ ಬೆಳವಣಿಗೆ ಜೊತೆಗೆ ದೈಹಿಕ ಆರೋಗ್ಯವನ್ನು ಪಡೆಯಬಹುದು, ವಿದ್ಯಾರ್ಥಿಗಳು ಮಾನವೀಯ ಮೌಲ್ಯವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು

ಅಧ್ಯಕ್ಷತೆ ವಹಿಸಿದ್ದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈಯವರು ಮಾತನಾಡಿ ಕ್ರೀಡೆಯಲ್ಲಿ ಭಾಗವಹಿಸುವುದೇ ಮುಖ್ಯವಾಗಿದ್ದು, ಬಹುಮಾನ ಪಡೆಯುವುದು ಮುಖ್ಯವಲ್ಲ, ಕ್ರೀಡಾ ಚಟುವಟಿಕೆಯಿಂದ ವಿದ್ಯಾರ್ಥಿಗಳ ಸರ್ವಂಗೀಣ ಪ್ರಗತಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿದೆ ಎಂದು ಹೇಳಿದರು.
ಕ್ರೀಡಾ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿ ಪ್ರಣವ್‌ರವರು ನೇರವೇರಿಸಿದರು. ವೇದಿಕೆಯಲ್ಲಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಆಶ್ವಿನ್ ಎಲ್ ಶೆಟ್ಟಿ ಸವಣೂರು, ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ನಾರಾಯಣ ಮೂರ್ತಿರವರುಗಳು ಉಪಸ್ಥಿತರಿದ್ದರು. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಸ್ವಾಗತಿಸಿ, ವಿದ್ಯಾರ್ಥಿಗಳಾದ ಫಾತಿಮ ಶಮ್ನಾ ವಂದಿಸಿ. ಸಮಾಹಿತ್ ಜೈನ್ ಕಾರ್‍ಯಕ್ರಮ ನಿರೂಪಿಸಿದರು.