ಸುಳ್ಯ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧೆಗೆ ನಿರ್ಧಾರ, ಆಭ್ಯರ್ಥಿ ಯಾರು ಗೊತ್ತೇ ?

0

ಈಗ ದೇಶದಲ್ಲಿ ಹೆಚ್ಚು ಸುದ್ದಿ ಮಾಡುತ್ತಿರುವ ಪಕ್ಷ ಆಮ್ ಆದ್ಮಿ ಪಕ್ಷ. ದೆಹಲಿ ಮತ್ತು ಪಂಜಾಬ್ ರಾಜ್ಯಗಳನ್ನು ಗೆದ್ದು ಆಡಳಿತ ನಡೆಸುತ್ತಿರುವ ಆಪ್ ಮೊನ್ನೆ ನಡೆದ ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳ ಚುನಾವಣೆಯಲ್ಲಿ ಯಶಸ್ಸು ಕಾಣಲಾಗದಿದ್ದರೂ, ರಾಷ್ಟ್ರೀಯ ಪಕ್ಷವೆಂಬ ಮಾನ್ಯತೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದೀಗ ಅವರು ಮುಂಬರಲಿರುವ ಕರ್ನಾಟಕದ ಚುನಾವಣೆಯತ್ತ ಗಮನ ಹರಿಸತೊಡಗಿದ್ದು, ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲು ನಿರ್ಧರಿಸಿದ್ದಾರೆ.
ದ.ಕ.ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಗುರುತಿಸಿರುವ ಆಮ್ ಆದ್ಮಿ ಪಾರ್ಟಿಯವರು ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಸುಳ್ಯದ ಮಾಜಿ ಶಾಸಕ ಕೆ.ಕುಶಲರ ಪುತ್ರಿಯಾಗಿರುವ ಶ್ರೀಮತಿ ಸುಮನಾ ಬೆಳ್ಳಾರ್ಕರ್ ರವರನ್ನು ನಿಲ್ಲಿಸಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ. ಇಬ್ಬರು ಪುಟ್ಟ ಮಕ್ಕಳ ತಾಯಿಯಾಗಿರುವ ಸುಮನಾ ಎಂ.ಬಿ.ಎ. ಪದವೀಧರೆ.