ಪ.ಜಾತಿಗಳ ವರ್ಗೀಕರಣ ಕುರಿತು ಪರಿಶೀಲಿಸಿ ಸೂಕ್ತ ಶಿಫಾರಸು ಮಾಡಲು ಸಚಿವ ಸಂಪುಟದ ಉಪ ಸಮಿತಿ ರಚನೆ, ಐವರ ಸಮಿತಿಯಲ್ಲಿ ಸಚಿವ ಎಸ್.ಅಂಗಾರರಿಗೆ ಸ್ಥಾನ

0

ಪರಿಶಿಷ್ಟ ಜಾತಿಗಳ ವರ್ಗೀಕರಣದ (ಒಳ ಮೀಸಲಾತಿ) ಕುರಿತು ಪರಿಶೀಲಿಸಿ ಸೂಕ್ತ ಶಿಫಾರಸುಗಳನ್ನು ಮಾಡಲು ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.

ಸಮಿತಿಯ ಅಧ್ಯಕ್ಷರಾಗಿ ಕಾನೂನು, ಸಂಸದೀಯ ವ್ಯವಹಾರಗಳ ಇಲಾಖಾ ಸಚಿವ ಜೆ.ಸಿ. ಮಾಧುಸ್ವಾಮಿಯವರನ್ನು ನೇಮಕ ಮಾಡಲಾಗಿದ್ದು, ಸದಸ್ಯರುಗಳಾಗಿ ನೀರಾವರಿ ಸಚಿವ ಗೋವಿಂದ ಕಾರಜೋಳ, ಮೀನುಗಾರಿಕಾ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾನ್, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರನ್ನು ನೇಮಕಗೊಳಿಸಿ ಸರಕಾರ ಆದೇಶ ಮಾಡಿದೆ.