ಬೆಳ್ಳಾರೆಯಲ್ಲಿ ಸ್ನೇಹಿತರ ಕಲಾಸಂಘದ ಆಶ್ರಯದಲ್ಲಿ ಸತ್ಯನಾರಾಯಣ ಪೂಜೆ, ಕುಣಿತ ಭಜನೋತ್ಸವ

0

ಸ್ನೇಹಿತರ ಕಲಾ‌ ಸಂಘ ಬೆಳ್ಳಾರೆ ಇದರ ಆಶ್ರಯದಲ್ಲಿ ಸುಮಾರು 6 ತಿಂಗಳುಗಳಿಂದ ನಡೆಯುತ್ತಿರುವ ಮಕ್ಕಳ ಕುಣಿತ ಭಜನಾ ತರಬೇತಿಯ ಸಮಾರೋಪ, ರಂಗಪ್ರವೇಶ, ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಕುಣಿತ ಭಜನೋತ್ಸವ ಕಾರ್ಯಕ್ರಮ ಡಿ. 14ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನ ಬೆಳ್ಳಾರೆಯಲ್ಲಿ ನಡೆಯುತ್ತಿದೆ.
ಬೆಳಿಗ್ಗೆ ಪ್ರಾರ್ಥನೆಯ ಬಳಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭಗೊಂಡಿತು. ಬಳಿಕ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ತಂಡ ಬೆಳ್ಳಾರೆ ಇವರಿಂದ ಭಜನಾ ಸಂಕೀರ್ತನೆ ನಡೆಯಿತು.

ಮಧ್ಯಾಹ್ನ ಮಂಗಳಾರತಿ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ಜರಗಲಿದೆ. ಅ. 3.00 ಗಂಟೆಯಿಂದ ಕುಣಿತ ಭಜನೋತ್ಸವ ಜರಗಲಿದೆ. ಸಂಜೆ 5.30ರಿಂದ ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ವಸಂತ ಉಲ್ಲಾಸ್ ರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಲಿದ್ದು, ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾದ್ವಿ ಮಾತಾನಂದಮಯಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಕರ್ನಾಟಕ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಕಡಬ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಕಾರ್ಯದರ್ಶಿ ಹಾಗೂ ಭಜನಾ ತರಬೇತುದಾರರಾದ ಸದಾನಂದ ಆಚಾರ್ಯ ಕಾಣಿಯೂರುರವರಿಗೆ ಈ ಸಂದರ್ಭದಲ್ಲಿ ಗೌರವಾರ್ಪಣೆ ನಡೆಯಲಿದೆ. ಅನೇಕ ಗಣ್ಯರು ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ವಿಠಲ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ಗೀತ ಸಾಹಿತ್ಯ ಸಂಭ್ರಮ ನಡೆಯಲಿದೆ.