ದುಗ್ಗಲಡ್ಕದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆ, ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು : ಸಚಿವ ಎಸ್.ಅಂಗಾರ

0

ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಯೋಜನೆಯಾದ ನಗರ ಪ್ರದೇಶದ ಜನರ ಆರೋಗ್ಯ ಕಾಳಜಿಗಾಗಿ ಆರಂಭವಾದ ನಮ್ಮ ಕ್ಲಿನಿಕ್ ರಾಜ್ಯಾದ್ಯಂತ ಇಂದು ಏಕಕಾಲದಲ್ಲಿ ಆರಂಭಗೊಂಡಿದ್ದು ದುಗ್ಗಲಡ್ಕ ದ ಶಂಕರ್ ಕಾಂಪ್ಲೆಕ್ಸ್ ನಲ್ಲಿಯೂ ಉದ್ಘಾಟನೆಗೊಂಡಿತು.
ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ನಮ್ಮ ಕ್ಲಿನಿಕ್ ನ್ನು ಉದ್ಘಾಟಸಿ ಮಾತನಾಡಿ ಸರಕಾರ ಯೋಜನೆಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.

ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಸಭಾಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ಮೀನುಗಾರಿಕೆ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ನಗರ ಪಂಚಾಯತ್ ಸದಸ್ಯರುಗಳಾದ ಶ್ರೀಮತಿ ಶಶಿಕಲಾ ನೀರಬಿದಿರೆ, ಬಾಲಕೃಷ್ಣ ರೈ ದುಗ್ಗಲಡ್ಕ, ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್, ನ.ಪಂ.ಮುಖ್ಯಾಧಿಕಾರಿ ಸುಧಾಕರ್,ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್ ಕೆ.,ಜಿಲ್ಲಾ ತರಬೇತು ಕೇಂದ್ರದ ಪ್ರಾಂಶುಪಾಲರಾದ ಡಾ.ಅಶೋಕ್,ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ್, ಕಟ್ಟಡ ದ ಮಾಲಕರಾದ ಶ್ಯಾಮ್ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆಶಾ ಕಾರ್ಯಕರ್ತೆಯರ ಮೇಲ್ವಿಚಾರಕಿ ಧನ್ಯಶ್ರೀ ಸ್ವಾಗತಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ಸಹಾಯಕಿ ಶ್ರೀಮತಿ ಶಶಿಕಲಾ ವಂದಿಸಿದರು. ಕ್ಷೇತ್ರ ಆರೋಗ್ಯಾಧಿಕಾರಿ ಶ್ರೀಮತಿ ಪ್ರಮಿಳ ಕಾರ್ಯಕ್ರಮ ನಿರೂಪಿಸಿದರು.