ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಜಾತ್ರೋತ್ಸವದ ಪೂರ್ವಭಾವಿ ಸಭೆ

0

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಸ್ಥಾನದ ಜಾತ್ರೋತ್ಸವದ ಬಗ್ಗೆ ಪೂರ್ವಭಾವಿ ಸಭೆ ಡಿ. 14ರಂದು ಮೂರು ಕಲ್ಲಡ್ಕ ಶ್ರೀ ಉಳ್ಳಾಕುಲು ಸನ್ನಿಧಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಸುಬ್ರಾಯ ಅಡಿಕೆಹಿತ್ಲುರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ.ಜಿ.ಎಸ್.ಎನ್. ಪ್ರಸಾದ್, ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಗಣೇಶ್ ಮುದ್ದಾಜೆ, ಎನ್. ವಿಶ್ವನಾಥ ರೈ, ಶೀನಪ್ಪ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೂರಾರು ಭಕ್ತರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಈ ವರ್ಷದ ಜಾತ್ರೋತ್ಸವವನ್ನು ಈ ಹಿಂದಿನಂತೆ ಯಥಾಸ್ಥಿತಿಯಲ್ಲಿ ಮುಂದುವರಿಸಿಕೊಂಡು ಹೋಗುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.