ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ಕೆ.ಪಿ.ಶಿವಪ್ರಕಾಶ್ ನಿಧನ

0

ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ಕೆ.ಪಿ.ಶಿವಪ್ರಕಾಶ್ ರವರು ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಸುಮಾರು 58 ವರ್ಷ ವಯಸ್ಸಾಗಿತ್ತು.
ಇತ್ತೀಚಿನ ಕೆಲ ಸಮಯದಿಂದ ಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಕಳೆದ ಸೋಮವಾರ ಮನೆಯಲ್ಲಿರುವಾಗ ಅವರಿಗೆ ಬ್ರೈನ್ ಹ್ಯಾಮರೇಜ್ ಆಯಿತೆನ್ನಲಾಗಿದೆ. ಕೂಡಲೇ ಅವರನ್ನು ಮಹಾವೀರ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಇಂದು ಮಧ್ಯಾಹ್ನ ಅವರು ಕೊನೆಯುಸಿರೆಳೆದರು.
ಮೃತದೇಹದ ಅಂತ್ಯಕ್ರಿಯೆ ಪುತ್ತೂರಿನ ಸ್ಮಶಾನದಲ್ಲಿ ನಡೆಯಿತು. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.