ಮಾನವ ಹಕ್ಕುಗಳ ಬಗೆಗಿನ ಅರಿವು ಸುಸ್ಥಿರ ಸಮಾಜ ನಿರ್ಮಾಣಕ್ಕೆ ಪೂರಕ : ವತ್ಸಲಾ ನಾಯಕ್

0


ಮಾನವ ಹಕ್ಕುಗಳ ಬಗೆಗಿನ ಅರಿವು ಸುಸ್ಥಿರ ಸಮಾಜ ನಿರ್ಮಾಣಕ್ಕೆ ಪೂರಕ ಎಂಬುದಾಗಿ ಪುತ್ತೂರಿನ ಸಾಮಾಜಿಕ ಕಾರ್ಯಕರ್ತೆ ವತ್ಸಲಾ ನಾಯಕ್ ಅವರು ಅಭಿಪ್ರಾಯ ಪಟ್ಟಿದ್ದಾರೆ. ಅವರು ಡಾ. ಕೆ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇಲ್ಲಿ ನಡೆದ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಘೋಷಣೆ ದಿನಾಚರಣೆ ಪ್ರಯುಕ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಂಪನ್ಮೂಲವ್ಯಕ್ತಿಯಾಗಿ ಭಾಗವಹಿಸಿದರು. ತಮ್ಮ ಹಕ್ಕುಗಳನು ಅನುಭವಿಸಲು ಎಲ್ಲರೂ ಹಕ್ಕುಗಳ ಬಗ್ಗೆ ಅರಿವನ್ನು ಪಡೆಯುವುದು ಅಗತ್ಯ ಎಂದು ಹೇಳಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ. ದಾಮೋದರ ಕಣಜಾಲು ಮಾತನಾಡಿ ನಮ್ಮೊಳಗಿನ ಜಾಗೃತಿ ನಮ್ಮ ಹಕ್ಕುಗಳನ್ನು ಅನುಭವಿಸಲು ಪೂರಕ ಎಂದು ಹೇಳಿದರು.


ಮಾನವ ಹಕ್ಕುಗಳ ಘಟಕದ ಸಂಚಾಲಕರಾದ ಪ್ರೊ. ಪುರುಷೋತ್ತಮ ಹೆಚ್. ಪಿ ಅವರು ಪ್ರಾಸ್ತಾವಿಕ ನುಡಿಯಲ್ಲಿ ಭಾರತದಲ್ಲಿ ಮಾನವ ಹಕ್ಕುಗಳು ಎಲ್ಲಾ ನಾಗರಿಕರಿಗೂ ಸಂವಿಧಾನತ್ಮಾಕವಾಗಿ ದೊರೆಯಲು ಸಾಮಾಜಿಕ ಹೋರಟಗಾರರಾದ ಜೋತಿ ಬಾ ಪುಲೇ, ನಾರಾಯಣಗುರು, ಪೆರಿಯರ್, ಡಾ. ಬಿ. ಆರ್. ಅಂಬೇಡ್ಕರ್ ಅವರು ಕಾರಣ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಕೋಶ ಸಂಚಾಲಕರಾದ ಡಾ. ಮಂಜುನಾಥ ಜಿ. ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪ್ರೊ. ಕಾಂತರಾಜು ವೇದಿಕೆಯಲ್ಲಿದರು, ಎಲ್ಲಾ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನೀಷ್ಮಾ ಸ್ವಾಗತಿಸಿ, ಅಶ್ವಿನಿ ವಂದಾನರ್ಪಣೆ ಮಾಡಿದರು. ಅಮೂಲ್ಯ ಕಾರ್ಯಕ್ರಮ ನಿರೂಪಿಸಿದರು.