ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯಕ್ಕೆ ರಜತ ಸಂಭ್ರಮ, ಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭ; ಸಾಂಸ್ಕೃತಿಕ ಪ್ರದರ್ಶನ, ಇಂದು ಅಪರಾಹ್ನ “ಕುಮಾರ ಪರ್ವ” ಕಾರ್ಯಕ್ರಮದ ಉದ್ಘಾಟನೆ

0

ರಜತ ಮಹೋತ್ಸವ ಸಂಭ್ರಮದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ” ಕುಮಾರ ಪರ್ವ “ಕಾರ್ಯಕ್ರಮದ ಅಂಗವಾಗಿ ಇಂದು
ಪೂರ್ವಾಹ್ನ ಶಾಲಾ ಧ್ವಜಾರೋಹಣ ನಡೆದಿದ್ದು ಸುಬ್ರಹ್ಮಣ್ಯ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಲಲಿತಾ ಗುಂಡಡ್ಕ ಧ್ವಜಾರೋಹಣ ಮಾಡಿದರು.

ಅನುಗ್ರಹ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಗಣೇಶ್ ಪ್ರಸಾದ್, ಶಾಲಾ ಸಂಚಾಲಕ ಚಂದ್ರಶೇಖರ ನಾಯರ್, ರಜತ ಸಂಭ್ರಮ ಸಮಿತಿ ಅಧ್ಯಕ್ಷ ಶಿವರಾಮ ಏನೆಕಲ್ಲು, ಕುಮಾರಸ್ವಾಮಿ ಪಿ.ಯು ಕಾಲೇಜಿನ ಪ್ರಾಂಶುಪಾಲ ಡಾ. ಸಂಕೀರ್ತ ಹೆಬ್ಬಾರ್ , ಪ್ರೌಡಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾರತ್ನ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪ್ರಸಾದ್‌ ಮುನಿಯಂಗಳ, ಕನ್ನಡ ವಿದ್ವಾಂಸ ಎನ್. ಕೇಶವ ಭಟ್, ವೆಂಕಟ್ರಾಜ್ ಸುಬ್ರಹ್ಮಣ್ಯ, ಮೊದಲಾದವರು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಸಾಂಸ್ಕೃತಿಕ ಪ್ರದರ್ಶನ ನಡೆಯಲಿದ್ದು, ಸಂಜೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಆ ಬಳಿಕ ವಿದ್ಯಾಭೂಷಣ ಬೆಂಗಳೂರು ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ.