ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆ : ಶಾಲಾ ವಾರ್ಷಿಕೋತ್ಸವ

0


ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇದರ ಶಾಲಾವಾರ್ಷಿಕೋತ್ಸವವು ಸಂಪನ್ನಗೊಂಡಿತು. ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್ ವೆಂಕಟ್ರಮಣಭಟ್ ವಹಿಸಿದ್ದರು. ವಿದ್ಯಾರಶ್ಮಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಸೀತಾರಾಮ ಕೇವಳ ಮುಖ್ಯ ಅತಿಥಿಯಾಗಿ ಭಾಗವಹಿಸಿ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಶಿಕ್ಷಣದ ಹಾಗೂ ಶಿಕ್ಷಕರ ಪಾತ್ರ ಹಿರಿದು, ನಾವು ಏನನ್ನು ಅನುಸರಿಸುತ್ತಿದ್ದೇವೆ ಎಂಬ ಅರಿವು ವಿದ್ಯಾರ್ಥಿಗಳಿಗೆ ಇರಬೇಕು ಎಂದು ಅಭಿಪ್ರಾಯಪಟ್ಟರು.
ಬಾಳಿಲ ಗ್ರಾಮಪಂಚಾಯತು ಅಧ್ಯಕ್ಷೆಯಾದ ಶ್ರೀಮತಿ ಸವಿತಾ ಕೆ ಅತಿಥಿಯಾಗಿ ಭಾಗವಹಿಸಿ ಶುಭಹಾರೈಸಿದರು. ಶಾಲಾ ಕೋಶಾಧಿಕಾರಿ ರಾಧಾಕೃಷ್ಣ ರಾವ್ ಯು ಶುಭಾಶಂಸನೆಗೈದರು. ಶಾಲಾ ಸಂಚಾಲಕ ಪಿ.ಜಿ.ಎಸ್.ಎನ್.ಪ್ರಸಾದ್ ಸ್ವಾಗತಿಸಿದರು. ಮುಖ್ಯೋಪಾಧ್ಯಾಯರಾದ ಯಶೋಧರ ನಾರಾಲು ವಾರ್ಷಿಕ ವರದಿಯನ್ನು ವಾಚಿಸಿದರು. ರಾಜ್ಯಸ್ತರದ ಕ್ರೀಡಾಪಟು ಕು. ಅನುಶ್ರೀ ಎಂ ಇವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಶಿಕ್ಷಕರಾದ ವೆಂಕಟೇಶ್ ಕುಮಾರ ನಿರ್ವಹಿಸಿದರು. ಸಾಹಿತ್ಯಿಕ ಹಾಗೂ ಕ್ರೀಡಾ ವಿಭಾಗದಲ್ಲಿನ ವಿಶೇಷ ಬಹುಮಾನಗಳನ್ನು ವಿತರಿಸಲಾಯಿತು. ಕು.ಇಂಚರ ಮತ್ತು ದೀಪಿಕಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಶಿಕ್ಷಕರಾದ ಉದಯಕುಮಾರ ರೈ ಕೃತಜ್ಞತೆಗಳನ್ನು ಸಲ್ಲಿಸಿದರು. ವಿವಿಧ ತರದ ನೃತ್ಯಗಳನ್ನು ನಾಟಕಗಳನ್ನು ಕೋಲಾಟ, ಯಕ್ಷಗಾನ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು.


ವಾರ್ಷಿಕೋತ್ಸವದ ನಿಮಿತ್ತ ನಡೆಸಿದ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮುಳಿಯ ಕೇಶವಭಟ್ ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾಮನೋಭಾವ ಸಾದನೆಗೆ ದಾರಿ ಮಾಡಿಕೊಡುತ್ತದೆ ಎಂದರು. ಅತಿಥಿಗಳಾದ ಶ್ರೀಮತೀ ತ್ರಿವೇಣಿ ವಿಶ್ವೇಶ್ವರ ಮಾತನಾಡುತ್ತಾ ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರವನ್ನು ಬೆಳೆಸಿಕೊಂಡಾಗ ಶಿಕ್ಷಕರ ಪರಿಶ್ರಮಕ್ಕೆ ಸಾರ್ಥಕ್ಯ ಬರುತ್ತದೆ ಎಂದರು. ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ ಕೆ. ಶುಭ ಹಾರೈಸಿದರು. ಶಾಲಾ ಅಧ್ಯಕ್ಷರಾದ ಎನ್ ವೆಂಕಟ್ರಮಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಶಾಲಾಸಂಚಾಲಕರು ಗಣ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಸಾಹಿತ್ಯಿಕ ಹಾಗೂ ಗುಂಪಾಟ ಸ್ಪರ್ಧೆಗಳಲ್ಲಿ ಬಹುಮಾನಿತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಾದ ಜನಕ ಕೆ. ಮತ್ತು ಲೋಚನ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಮೋಹನ ಕೆ.ಸಿ. ವಂದಿಸಿದರು.