ಆಲೆಟ್ಟಿ ಸರಕಾರಿ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭ- ಸಾಂಸ್ಕೃತಿಕ ಕಾರ್ಯಕ್ರಮ

0

ಆಲೆಟ್ಟಿ ಸರಕಾರಿ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭವು ಡಿ.17 ರಂದು ನಡೆಯಿತು.


ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಕುಡೆಕಲ್ಲು ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಿವೃತ್ತ ಶಿಕ್ಷಕ ಬಾಲಕೃಷ್ಣ ಬಿ.ಟಿ ಯವರು ಶಿಕ್ಷಣ ಪದ್ಧತಿಯ ಕುರಿತು ಉಪನ್ಯಾಸ ನೀಡಿದರು.


ಆಲೆಟ್ಟಿ ಪಂಚಾಯತ್ ಸದಸ್ಯರಾದ ಶಿವಾನಂದ ರಂಗತ್ತಮಲೆ, ಶ್ರೀಮತಿ ವೀಣಾ ವಸಂತ ಆಲೆಟ್ಟಿ,
ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಮತಿ ಶೀತಲ್ ಯು.ಕೆ,
ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಗೋಪಾಲಕೃಷ್ಣ ಪಿ.ಎ, ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಎಸ್, ವಿದ್ಯಾರ್ಥಿ ನಾಯಕಿ ಕು.ಪುಷ್ಪಿತಾ ಪಿ.ಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.ಸಹ ಶಿಕ್ಷಕಿ ಶ್ರೀಮತಿ ಭವಾನಿ ಕೆ ಸ್ವಾಗತಿಸಿದರುಸಿಬ್ಬಂದಿಶಿಕ್ಷಕಿ ವಿಜಯಲಕ್ಷ್ಮಿ ಪ್ರಾಸ್ತಾವಿಕ ಮಾತಿನೊಂದಿಗೆ ವಾರ್ಷಿಕ ವರದಿ ವಾಚಿಸಿದರು. ಸಹ ಶಿಕ್ಷಕಿ ಶ್ರೀಮತಿ ವಿದ್ಯಾ ಕೊಯಿಂಗಾಜೆ ಉಪನ್ಯಾಸಕರ ಪರಿಚಯ ಮಾಡಿದರು.
ಸಹ ಶಿಕ್ಷಕಿ ಶ್ರೀಮತಿ ರೇವತಿ ಕೆ ವಂದಿಸಿದರು. ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಅಭಿವೃದ್ಧಿ ಗೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು. ಹ್ಯಾಮರ್ ತ್ರೋ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ
ವಿದ್ಯಾರ್ಥಿನಿ ಕು. ಅನುಷಾ ಳನ್ನು ಅಭಿನಂದಿಸಲಾಯಿತು.

ವಾರ್ಷಿಕೋತ್ಸವ ಪ್ರಯುಕ್ತ ನಡೆದ
ವಿವಿಧ ಸ್ಪರ್ಧಾ ವಿಜೇತ ರಾದವರಿಗೆ ಬಹುಮಾನ ವಿತರಿಸಲಾಯಿತು.
ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡಿತು.
ಶಾಲೆಯ ಅಧ್ಯಾಪಕ ವೃಂದದವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಎಸ್‌ಡಿ.ಎಂ.ಸಿ.ಸದಸ್ಯರು, ಅಕ್ಷರ ದಾಸೋಹ ಸಿಬ್ಬಂದಿ ವರ್ಗದವರು, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದರು.