ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ವತಿಯಿಂದ LIONS QUEST ಕಾರ್ಯಕ್ರಮ

0


ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕದಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಹದಿಹರೆಯದ ವಿದ್ಯಾರ್ಥಿಗಳಿಗಾಗಿ LIONS QUEST ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ವಿದ್ಯಾರ್ಥಿಗಳೇ ತಯಾರಿಸಿದ ಹೂಗುಚ್ಛಗಳಿಂದ ಲಯನ್ಸ್ ನ ಅತಿಥಿಗಳನ್ನು ಸ್ವಾಗತಿಸಲಾಯಿತು.
ಪ್ರತಿ ವರ್ಷ ಶಾಲೆಯು ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಶಿಕ್ಷಕರಿಗಾಗಿ ಆಯೋಜಿಸುತ್ತಿತ್ತು, ಆದರೆ ಇದೀಗ ವಿದ್ಯಾರ್ಥಿಗಳಿಗಾಗಿ ತರಬೇತಿಗಳನ್ನು ಆರಂಭಿಸಿದೆ ಅದರ ಸದುಪಯೋಗಗಳನ್ನು ವಿದ್ಯಾರ್ಥಿಗಳು ಪಡೆಕೊಳ್ಳುವಂತಾಗಲೆಂದು ಶಾಲಾ ಪ್ರಾಂಶುಪಾಲರಾದ ಶೋಭಾಕಿಶೋರ್ ಆಶಿಸಿದರು.
೮ ರಿಂದ ೧೨ನೇ ವಯಸ್ಸಿನ ಮಕ್ಕಳ ಮನಸ್ಸು ಹೆಚ್ಚಾಗಿ ಮನರಂಜನೆ ಕಡೆ ವಾಲುತ್ತದೆ. ಆಗ ವಿದ್ಯಾರ್ಥಿಗಳಲ್ಲಿ ಏಕಾಗ್ರತೆಯ ಕೊರತೆ ಉಂಟಾಗುತ್ತದೆ .ಜೀವನ ಎಂಬುದು ಸವಾಲು ಆ ಸವಾಲುಗಳನ್ನು ಎದುರಿಸುವ ಶಕ್ತಿ ನಮ್ಮಲ್ಲಿರಬೇಕೆಂದು ಲಯನ್ಸ್ ಕ್ಲಬ್ ನ ಜಿಲ್ಲಾ ಸಂಯೋಜಕರಾದ ರತ್ನ ಚೆರ್ಮನಾ ನುಡಿದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ವತಿಯಿಂದ S. F. A ಎನ್ನುವ ಪುಸ್ತಕವನ್ನು ೬ರಿಂದ ೮ನೇತರಗತಿಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ , ಸುಳ್ಯ ಲಯನ್ಸ್ ಕ್ಲಬ್ ನ ಅಧ್ಯಕ್ಷೆ ರೂಪಶ್ರೀ ರೈ, ಸಂಪಾಜೆ ಲಯನ್ಸ್ ಕ್ಲಬ್ ನ ಅಧ್ಯಕ್ಷೆ ನಳಿನಿ ಕಿಶೋರ್ , ಲಯನ್ಸ್ ಕ್ಲಬ್ ನ ಎಲ್ಲಾ ಸದಸ್ಯರು, ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್, ವಿದ್ಯಾರ್ಥಿಗಳು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು