ಪಯಸ್ವಿನಿ ಕೃಷಿ ಮೇಳ ಸಮಾರೋಪ, ಭೂಮಿಯ ಕೃಷಿ ಸಮೃದ್ಧವಾದರೆ ದೇಶ ಸಮೃದ್ಧ- ಒಡಿಯೂರು ಶ್ರೀ

0

ಕೃಷಿಯಲ್ಲಿ ಎರಡು ಆಯಾಮವಿದೆ.ಒಂದು ಭೂಮಿಯ ಕೃಷಿ, ಮತ್ತೊಂದು ಅಂತರಂಗದ ಕೃಷಿ. ಭೂಮಿಯ ಕೃಷಿ ಸಮೃದ್ಧವಾದರೆ ದೇಶ ಸಮೃದ್ಧವಾಗುತ್ತದೆ.ಅಂತರಂಗ ಸಮೃದ್ಧವಾದರೆ ಬದುಕು ಸುಂದರವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.ಅವರು ಪ್ರಣವ ಸೌಹಾರ್ದ ಸಹಕಾರಿ ಸಂಘ ನಿ ,ಸುಳ್ಯ ರೈತ ಉತ್ಪಾದಕರ ಕಂಪೆನಿ ನಿ, ಮಂಗಳೂರು ವಿಶ್ವವಿದ್ಯಾನಿಲಯ , ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು , ಸಹಕಾರಿ ಯೂನಿಯನ್, ಸುದ್ದಿ ಸಮೂಹ ಸಂಸ್ಥೆ ಜಂಟಿ ಆಶ್ರಯದಲ್ಲಿ ತಾಲೂಕು ಆಡಳಿತ, ನಗರ ಪಂಚಾಯತ್ ಮತ್ತು ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಿಂದ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಆಯೋಜಿಸಲಾದ ಬೃಹತ್‌ ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ
ನೀಡಿದರು.

ಕೃಷಿಯಲ್ಲಿ ಸ್ವಾತಂತ್ರ್ಯವಿದೆ, ವಿರಾಮವಿದೆ, ಆರೋಗ್ಯವಿದೆ. ಸನಾತನದೊಂದಿಗೆ ನೂತನವನ್ನು ಹೊಂದಿಸಿಕೊಂಡು ಕೃಷಿ ಮಾಡಿದರೆ ಬದುಕು ಖುಷಿಯಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ್ ಮಾತನಾಡಿ ಹಿರಿಯರು ಕಲಿಸಿಕೊಟ್ಟ ಕೃಷಿ ಪರಂಪರೆಯನ್ನು ಮುಂದುವರಿಸಿಕೊಂಡು ಬರುವುದರ ಜೊತೆಗೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಹೆಚ್ಚು ಫಸಲು ಪಡೆದು ಕೃಷಿಯನ್ನು ಲಾಭದಾಯವಾಗಿ ಮಾಡಬೇಕು ಎಂದು ಹೇಳಿದರು.

ಕೆಎಂಎಫ್ ಅಧ್ಯಕ್ಷ ಸುಚರಿತ ಶೆಟ್ಟಿ, ತಹಶೀಲ್ದಾರ್ ಅನಿತಾಲಕ್ಷ್ಮಿ, ಹಿರಿಯ ಸಹಕಾರಿ ನಿತ್ಯಾನಂದ ಮುಂಡೋಡಿ, ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ನ.ಪಂ. ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ಕೆ.ಎಫ್.ಡಿ.ಸಿ ಮಾಜಿ ಅಧ್ಯಕ್ಷ ಎಸ್. ಎನ್. ಮನ್ಮಥ, ಚೆನ್ನಕೇಶವ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಸುದ್ದಿ ಮಾಧ್ಯಮ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ.ಶಿವಾನಂದ ಅತಿಥಿಗಳಾಗಿ ಭಾಗವಹಿಸಿದ್ದರು.ಪ್ರಣವ ಸಹಕಾರಿ ಸಂಘದ ಅಧ್ಯಕ್ಷ ಜಿ. ಆರ್. ಪ್ರಸಾದ್
ಅಧ್ಯಕ್ಷತೆ ವಹಿಸಿದ್ದರು.

ಕೃಷಿ ಮೇಳದ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳಾದ ಡಾ.ಎನ್.ಎ.ಜ್ಞಾನೇಶ್, ಹರೀಶ್ ಉಬರಡ್ಕ, ಯಶ್ವಿತ್ ಕಾಳಮ್ಮನೆ, ರಂಜಿತ್ ಅಡ್ತಲೆ ಸಂತೋಷ್ ಜಾಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂತೋಷ್ ಕುತ್ತಮೊಟ್ಟೆ ಸ್ವಾಗತಿಸಿ,
ದಿನೇಶ್ ಮಡಪ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ವೀರಪ್ಪ ಗೌಡ ವಂದಿಸಿದರು. ಸೋಮಶೇಖರ ನೇರಳ ಕಾರ್ಯಕ್ರಮ ನಿರೂಪಿಸಿದರು. ಕೃಷಿ ಮೇಳ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಿ.ಆರ್.ಪ್ರಸಾದ್ ಹಾಗು ಪ್ರಧಾನ‌ ಕಾರ್ಯದರ್ಶಿ ವೀರಪ್ಪ ಗೌಡ ಕಣ್ಕಲ್ ಅವರನ್ನು ಸನ್ಮಾನಿಸಲಾಯಿತು.

ಲಂಚ, ಭ್ರಷ್ಟಾಚಾರ ವಿರುದ್ಧ ಪ್ರತಿಜ್ಞೆ

ಕಾರ್ಯಕ್ರಮದಲ್ಲಿ ಲಂಚ, ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ ಸ್ವೀಕರಿಸಲಾಯಿತು. ಸುದ್ದಿ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ ಪ್ರತಿಜ್ಞೆ ಬೋದಿಸಿದರು.