ಬೆಳ್ಳಾರೆಯ ಉದ್ಯಮಿ ನವೀನ್ ಕಾಮಧೇನು ಅಪಹರಣ?, ಸುಂಟಿಕೊಪ್ಪದಲ್ಲಿ ಆಂಬ್ಯುಲೆನ್ಸ್ ಗೆ ತಡೆಯೊಡ್ಡಿ ಪೊಲೀಸರಿಗೆ ಹಸ್ತಾಂತರ

0

ಬೆಳ್ಳಾರೆಯ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಕಾಮಧೇನು ಅವರನ್ನು ತಂಡವೊಂದು ಬಂದು ಬಲವಂತವಾಗಿ ಆಂಬ್ಯುಲೆನ್ಸ್ ನಲ್ಲಿ ಕೊಂಡೊಯ್ದ ಘಟನೆಯೊಂದು ನಡೆದಿದೆ.

ಮನೆಗೆ ಬಂದ ತಂಡವೊಂದು ಮನೆಯಲ್ಲಿದ್ದ ನವೀನ್ ಅವರನ್ನು ಬಲವಂತವಾಗಿ ಕೊಂಡೊಯ್ದರೆಂದೂ, ತಡೆದ ತಾಯಿಯ ಮೇಲೆ ಹಲ್ಲೆ ನಡೆಸಿದರೆಂದೂ ತಿಳಿದು ಬಂದಿದೆ.

ಲಭ್ಯ ಮಾಹಿತಿಯ ಪ್ರಕಾರ, ಇವರನ್ನು ಆಂಬ್ಯುಲೆನ್ಸ್ ನಲ್ಲಿ‌ ಅಪಹರಿಸಲಾಗಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸುಳ್ಯದ ಆಂಬ್ಯುಲೆನ್ಸ್ ನವರು ತಮ್ಮ ಗ್ರೂಪ್ ಗಳಿಗೆ ಮಾಹಿತಿ ರವಾನಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಬಳಿ ಅಲ್ಲಿಯ ಆಂಬ್ಯಲೆನ್ಸ್ ನವರು ಬೆಳ್ಳಾರೆಯಿಂದ ಹೋದ ಆಂಬ್ಯಲೆನ್ಸನ್ನು ತಡೆದು ಅದರಲ್ಲಿದ್ದ ನವೀನ್ ಮತ್ತು ಇತರರನ್ನು ಅಲ್ಲಿಯ ಪೊಲೀಸರಿಗೊಪ್ಪಿಸುವುದಾಗಿ ತಿಳಿದುಬಂದಿದೆ.