ಸುಳ್ಯ ಪೊಲೀಸ್ ಇಲಾಖೆ ವತಿಯಿಂದ ಅಪರಾಧ ತಡೆ ಮಾಸಾಚರಣೆ

0

ಪೊಲೀಸ್ ಇಲಾಖೆ ವತಿಯಿಂದ ರಾಜ್ಯದಾದ್ಯಂತ ನಡೆಯುತ್ತಿರುವ ಅಪರಾಧ ತಡೆ ಮಾಸಾಚರಣೆ 2022 ಇದರ ಅಂಗವಾಗಿ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದರ ಅಂಗವಾಗಿ ಡಿಸೆಂಬರ್ 15ರಂದು ಮಡಪ್ಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ, ಮತ್ತು ಅರಂತೋಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅಪರಾಧ ತಡೆ ಮಾಸಾಚರಣೆಯ ಜಾಗೃತಿ ಅಭಿಯಾನ ನಡೆಸಲಾಯಿತು.
ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಅಪರಾಧಗಳ ತಡೆಗಟ್ಟುವಿಕೆಗಾಗಿ ಸಾರ್ವಜನಿಕರು ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.


ತಮ್ಮ ತಮ್ಮ ಊರುಗಳಲ್ಲಿ ಅಪರಿಚಿತ ವ್ಯಕ್ತಿಗಳು, ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಅವರೊಂದಿಗೆ ಸಲಿಗೆಯನ್ನು ಬೆಳೆಸದೆ ಕೂಡಲೇ ಪೊಲೀಸರ ಗಮನಕ್ಕೆ ತರುವಂತೆ, ಮತ್ತು ಬೇರೆ ಬೇರೆ ಕಾರ್ಯಕ್ರಮಗಳ ನಿಮಿತ್ತ ಮನೆಗಳನ್ನು ಬಂದು ಮಾಡಿ ಬೇರೆ ಕಡೆ ಹೋಗುವ ಸಂದರ್ಭದಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕ ಕ್ರಮಗಳ ಮಾಹಿತಿಯನ್ನು ನೀಡಿದರು.
ಅಲ್ಲದೆ ತಮ್ಮ ತಮ್ಮ ಗ್ರಾಮಗಳಲ್ಲಿ ಅಥವಾ ಮನೆಯ ಪರಿಸರದಲ್ಲಿ ಅಪರಿಚಿತ ವಾಹನಗಳು ಓಡಾಡುವುದನ್ನು ಕಂಡು ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸೂಚಿಸಿದರು.
ಅಪರಾಧ ತಡೆಗಳಿಗಾಗಿ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸುವಂತೆ ಮನವಿ ಮಾಡಿಕೊಂಡರು.


ಅಭಿಯಾನ ಕಾರ್ಯಕ್ರಮದಲ್ಲಿ ಸುಳ್ಯ ಠಾಣಾ ಅಪರಾಧ ವಿಭಾಗದ ಎಸ್ ಐ ರತ್ನಕುಮಾರ್, ಹಾಗೂ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸ್ಥಳೀಯ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಅಭಿಯಾನ ಕಾರ್ಯಕ್ರಮವು ಡಿಸೆಂಬರ್ 1ರಿಂದ ಆರಂಭಗೊಂಡು ಡಿಸೆಂಬರ್ 31ರವರೆಗೆ ತಾಲೂಕಿನ ಬೇರೆ ಬೇರೆ ಕಡೆಗಳಲ್ಲಿ, ಸುಳ್ಯ ನಗರದ ವಿವಿಧ ಭಾಗಗಳಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.