ಡಾ. ಕೆ ವಿ.ರೇಣುಕಾಪ್ರಸಾದ್ ನಿವಾಸಕ್ಕೆ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ, ಅನುಗ್ರಹ ಸಂದೇಶ ಪಾದಪೂಜೆ

0

ಆದಿಚುಂಚನಗಿರಿ ಪೀಠಾಧಿಪತಿ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಡಿ. ೨೨ರಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ.ಯವರ ನಿವಾಸಕ್ಕೆ ಭೇಟಿನೀಡಿ ಅನುಗ್ರಹ ಸಂದೇಶ ನೀಡಿದರು.


ಮಂಗಳೂರು ಶಾಖಾ ಮಠದ ಕಾರ್ಯದರ್ಶಿಗಳಾದ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಜೊತೆಗಿದ್ದರು.
ಡಾ. ರೇಣುಕಾಪ್ರಸಾದ್ ಕೆ.ವಿ., ಡಾ. ಜ್ಯೋತಿ ಆರ್. ಪ್ರಸಾದ್, ಡಾ. ಅಭಿಜ್ಞಾ, ಮೌರ್ಯ ಆರ್.ಪ್ರಸಾದ್ ಮತ್ತು ಕೆ.ವಿ.ಜಿ ವಿದ್ಯಾ ಸಂಸ್ಥೆಗಳ ಸಿಬ್ಬಂದಿಗಳು ಪೂರ್ಣಕುಂಭದೊಂದಿಗೆ ಸ್ವಾಮೀಜಿಯವರನ್ನು ಬರಮಾಡಿಕೊಂಡರು.


ಬಳಿಕ ಸ್ವಾಮೀಜಿಯವರು ಅನುಗ್ರಹ ಸಂದೇಶ ನೀಡಿದರು. ನಂತರ ಗುರುವಂದನೆ, ಪಾದಪೂಜೆ ನಡೆಯಿತು. ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ, ಕೆವಿಜಿ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಆಡಳಿತಾಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು. ದಿನೇಶ್ ಮಡ್ತಿಲ ಸ್ವಾಗತಿಸಿ ಭವಾನಿಶಂಕರ ಅಡ್ತಲೆ ಕಾರ್ಯಕ್ರಮ ನಿರೂಪಿಸಿದರು. ಕೆವಿಜಿ ವಿದ್ಯಾಸಂಸ್ಥೆಗಳ ನೂರಾರು ಸಿಬ್ಬಂದಿಗಳು ಕುಟುಂಬ ಸಮೇತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಶ್ರೀ ಗುತ್ಯಮ್ಮ ದೇವಿ ದೇವಸ್ಥಾನಕ್ಕೆ ಭೇಟಿ :
ಡಾ. ರೇಣುಕಾಪ್ರಸಾದ್ ಕೆ.ವಿ.ಯವರ ಕಾಂತಮಂಗಲದ ನಿವಾಸದ ಸಮೀಪ ಪಯಸ್ವಿನಿ ನದಿಯ ದಡದಲ್ಲಿ ನಿರ್ಮಾಣಗೊಂಡಿರುವ ಶ್ರೀ ಗುತ್ಯಮ್ಮ ದೇವಿ ದೇವಸ್ಥಾನಕ್ಕೆ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರು, ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದರು.