ಪಂಚಾಯತ್ ಸದಸ್ಯರುಗಳ ಸಭಾ ಭತ್ಯೆ ಹೆಚ್ಚಳಕ್ಕೆ ಮನವಿ, ಮುಖ್ಯಮಂತ್ರಿ ಗಳ ಅಧೀನ ಕಾರ್ಯದರ್ಶಿ ಅವರಿಂದ ಇಲಾಖೆಗೆ ಪತ್ರ ರವಾನೆ

0

ಪೆರುವಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗನ್ನಾಥ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಕೆಲ ತಿಂಗಳ ಹಿಂದೆ ನಡೆದ ಸಾಮಾನ್ಯ ಸಭೆಯಲ್ಲಿ ಪಂಚಾಯತ್ ಸದಸ್ಯರುಗಳ ಸಭಾ ಭತ್ಯೆ ಹಲವಾರು ವರುಷಗಳಿಂದ ಏರಿಕೆ ಆಗದೇ ಸದಸ್ಯರುಗಳಿಗೆ ತುಂಬಾ ತೊಂದರೆಯಾಗುತ್ತಿದೆ, ಇದನ್ನು ಹೆಚ್ಚಿಸುವಂತೆ ಸರ್ಕಾರದ ಗಮನಕ್ಕೆ ತರಲು ನಿರ್ಣಯ ಕೈಗೊಂಡು ಮುಖ್ಯಮಂತ್ರಿ ಗಳಿಗೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅವರಿಗೆ ಮಾಡಿದ ಮನವಿ ಗೆ ಇದೀಗ ಮುಖ್ಯಮಂತ್ರಿ ಗಳ ಕಚೇರಿಯಿಂದ ಮನವಿ ಪತ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ರವಾನೆಯಾಗಿದೆ. ಇದರ ಬಗ್ಗೆ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು ತಾವು ನಿರ್ಣಯ ಕೈಗೊಂಡು ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಮಾಡಲು ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯ ರಾದ ಸಚಿನ್ ರಾಜ್ ಶೆಟ್ಟಿ ಸದಸ್ಯರಲ್ಲಿ ಮನವಿ ಮಾಡಿದ್ದಾರೆ.