ಇಂದು ಸುಳ್ಯದ ಬಂಟರ ಸಮುದಾಯ ಭವನ‌ ಲೋಕಾರ್ಪಣೆ, ಸಂಜೆ ಬಂಟರ‌‌ ಸಮಾವೇಶ – ಸಾಂಸ್ಕೃತಿಕ ಸಂಭ್ರಮ

0

ಸುಳ್ಯ ತಾಲೂಕು ಬಂಟರ ಯಾನೆ ನಾಡವರ ಸಂಘದ ನೇತೃತ್ವದಲ್ಲಿ ಸುಳ್ಯದ ಬೂಡು – ಕೇರ್ಪಳದಲ್ಲಿ ನಿರ್ಮಾಣಗೊಂಡಿರುವ ‘ಆಶಾ ಪ್ರಕಾಶ್ ಶೆಟ್ಟಿ’ ಬಂಟರ ಸಮುದಾಯ ಭವನದ ಲೋಕಾರ್ಪಣಾ ಸಮಾರಂಭ ಇಂದು (ಡಿ.24 ರಂದು) ನಡೆಯಲಿದೆ. ಸಮುದಾಯ ಭವನದ ಉದ್ಘಾಟನೆಯನ್ನು ಬೆಂಗಳೂರು ಎಂ.ಆರ್‌ .ಜಿ . ಗ್ರೂಫ್‌ ಚೇರ್‌ಮೆನ್ ಪ್ರಕಾಶ್ ಶೆಟ್ಟಿ ನೆರವೇರಿಸುವರು . ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗು ಸುಳ್ಯ ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸುವರು.ಸಭಾ ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ , ಮಾಜಿ ಸಚಿವ ಬಿ.ರಮಾನಾಥ ರೈ , ಮುಂಬೈಯ ಹೇರಂಭಾ ಗ್ರೂಪ್ ಕೇರ್ ಲಿಮಿಟೆಡ್‌ನ ನಿರ್ದೇಶಕರಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ , ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ , ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ಕೆ.ವಿ. ರೇಣುಕಾಪ್ರಸಾದ್ , ಬೆಂಗಳೂರು ಸಹಕಾರ ನಗರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗುರುಪ್ರಸಾದ್ ರೈ ಮೊರಂಗಲ್ಲು, ಸುಳ್ಯ ಚೆನ್ನಕೇಶವ ದೇವಸ್ಥಾನದ ಆಡಳಿತ ಮೊಕ್ತಸರ ಡಾ. ಹರಪ್ರಸಾದ್ ತುದಿಯಡ್ಕ , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ರಶ್ಮಿ , ಲಯನ್ಸ್ ಮಾಜಿ ರಾಜ್ಯಪಾಲ ಎಂ.ಬಿ. ಸದಾಶಿವ , ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ, ನ.ಪಂ. ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಭಾಗವಹಿಸಲಿದ್ದಾರೆ.

ಬಂಟರ ಸಮಾವೇಶ : ಸಮುದಾಯ ಭವನ ದಾನಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ಬಂಟರ ಸಮಾವೇಶ ಅಪರಾಹ್ನ 5 ರಿಂದ ನಡೆಯಲಿದೆ.ಬಂಟರ ಯಾನೆ ನಾಡವರ ಮಾತೃ ಸಂಘದಅಧ್ಯಕ್ಷ ಅಜಿತ್‌ ಕುಮಾರ್‌ ರೈ ಮಾಲಾಡಿ ಸಮಾವೇಶವನ್ನು ಉದ್ಘಾಟಿಸುವರು. ಬಂಟರ ಯಾನೆ ನಾಡವರ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಎನ್‌.ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಂಗಳೂರಿನ ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್‌ನ ಅಧ್ಯಕ್ಷ ಎ.ಸದಾನಂದ ಶೆಟ್ಟಿ , ಸವಣೂರು ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು, ಎಣ್ಮೂರು ನಾಗಬ್ರಹ್ಮ ಕೋಟಿ ಚೆನ್ನಯ ಗರಡಿಯ ಅನುವಂಶಿಕ ಆಡಳಿತ ಮೊಕ್ತಸರ ರಾಮಕೃಷ್ಣ ಶೆಟ್ಟಿ ಕಟ್ಟಬೀಡು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಶಾಸಕರಾದ ರಾಜೇಶ್ ನಾಯ್ಕ್ ಬಂಟ್ವಾಳ , ಹರೀಶ್ ಪೂಂಜ ಬೆಳ್ತಂಗಡಿ , ಭರತ್ ಶೆಟ್ಟಿ ಸುರತ್ಕಲ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೆ.ಎಂ.ಎಫ್ ಅಧ್ಯಕ್ಷ ಸುಚರಿತ ಶೆಟ್ಟಿ , ಬಂಟ್ವಾಳ ಬಂಟರ ಸಂಘದ ಮಾಜಿ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು , ಬೆಂಗಳೂರಿನ‌ ಕೆ.ಎಲ್.ಎಸ್ ಇಂಜಿನಿಯರಿಂಗ್ ಪ್ರೊಡಕ್ಟ್ಸ್ ಲಿಮಿಟೆಡ್‌ನ ನಿರ್ದೇಶಕ ಪ್ರಸನ್ನ ಕುಮಾರ್ ಶೆಟ್ಟಿ, ಎಸಿಎಫ್ ಪ್ರವೀಣ್ ಕುಮಾರ್ ಶೆಟ್ಟಿ ಸುಳ್ಯ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚನಿಲ ,ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಮುರಳೀಧರ ಹೆಗ್ಡೆ ಭಾಗವಹಿಸುವರು.

ಬೆಳಗ್ಗೆ ಉದ್ಘಾಟನಾ ಸಮಾರಂಭ ನಡೆಯಲಿದೆ‌.ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ನಡೆದ ಬಳಿಕ ಸಂಜೆ ಬಂಟರ ಸಮಾವೇಶ ನಡೆಯುವುದು . ರಾತ್ರಿ ಸಾಂಸ್ಕೃತಿಕ ಸಂಭ್ರಮ ನಡೆಯಲಿದೆ ಎಂದು ಬಂಟರ ಯಾನೆ ನಾಡವರ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಎನ್‌.ಜಯಪ್ರಕಾಶ್ ರೈ ತಿಳಿಸಿದ್ದಾರೆ.