ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

0


ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ವಿಜ್ಞಾನ ಸಂಘದ 2022- 23ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಡಿ. 23ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.


ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮೋಹನ್ ಗೌಡ ಬೊಮ್ಮೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿಜ್ಞಾನ ಕಾಲ್ಪನಿಕ ಕಟ್ಟುಕಥೆಯಲ್ಲ ವಾಸ್ತವ ಸತ್ಯ. ಯಾವುದೇ ಕಾರ್ಯವಾಗಬೇಕಾದರೆ ಕಾರಣ ಬೇಕು, ಆ ಕಾರಣ ಹುಡುಕುತ್ತಾ ಹೋಗುವುದೇ ವಿಜ್ಞಾನದ ಸೃಷ್ಟಿ. ನಮ್ಮ ಜೀವನ ಸಮೃದ್ದವಾಗಲು ತಂತ್ರಜ್ಞಾನದ ಬೆಳವಣಿಗೆ ಅಗತ್ಯ. ಸಾಕಷ್ಟು ವೈಜ್ಞಾನಿಕ ಸಂಶೋಧನೆಗಳಿಂದ ಇಂದು ನಮ್ಮ ಶ್ರಮ, ಸಮಯದ ಉಳಿತಾಯ ಆಗುತ್ತಿದೆ ಎಂದರು.


ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ. ಬಾಲಚಂದ್ರ ಗೌಡ ವಿಜ್ಞಾನ ಸಂಘದ ಮುಂದಿನ ಚಟುವಟಿಕೆಗಳಿಗೆ ಶುಭ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರ ಕುಮಾರ್ ವಹಿಸಿದ್ದರು. ವಿಜ್ಞಾನ ಸಂಘದ ಸದಸ್ಯರಾದ ಕು. ಚಂಪಾ ಮತ್ತು ತಂಡದವರು ಪ್ರಾರ್ಥಿಸಿ, ವಿಜ್ಞಾನ ಸಂಘದ ಅಧ್ಯಕ್ಷ ಪ್ರಜ್ವಲ್ ಕೆ.ಜೆ. ಸ್ವಾಗತಿಸಿದರು. ವಿಜ್ಞಾನ ಸಂಘದ ಸಂಯೋಜಕರಾದ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಸತ್ಯಪ್ರಕಾಶ್ ದೇರಪ್ಪಜ್ಜನಮನೆ ಪ್ರಾಸ್ತಾವಿಕ ಮಾತನಾಡಿದರು. ಕು. ಹಿತಶ್ರೀ ಉದ್ಘಾಟಕರನ್ನು ಪರಿಚಯಿಸಿ, ಕಾರ್ಯದರ್ಶಿ ಕು. ಅಂಜುಷ ವಂದಿಸಿದರು. ಕಾರ್ಯಕ್ರಮದಲ್ಲಿ
ವಿಜ್ಞಾನ ವಿಭಾಗಕ್ಕೆ ನೂತನ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಯಶಸ್ಸಿಗೆ ಉಪನ್ಯಾಸಕರಾದ ಉಷಾ, ಅಕ್ಷತಾ, ಕುಲದೀಪ್, ಅಶ್ವಿನಿ, ಕೃತಿಕಾ, ಪ್ರಣೀತಾ, ಹರ್ಷಕಿರಣ, ಶ್ರುತಿ ಮತ್ತು ಅಜಿತ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಜಯಂತಿ, ಸೌಮ್ಯ, ಗೀತಾ, ಭವ್ಯ, ಶಿವಾನಂದ ಹಾಗೂ ವಿದ್ಯಾರ್ಥಿಗಳು ಸಹಕರಿಸಿದರು.