ಪಂಜದಲ್ಲಿ ಲಯನ್ಸ್ ವತಿಯಿಂದ ವಿಜಯ ದಿವಸ್

0


ಲಯನ್ಸ್ ಕ್ಲಬ್ ಪಂಜ ಇದರ ಆಶ್ರಯದಲ್ಲಿ ‘ವಿಜಯ ದಿವಸ್” ಡಿ.23 ರಂದು ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು.ಪಂಜ ಸ.ಪ.ಪೂ.
ಕಾಲೇಜು ಪ್ರಾಂಶುಪಾಲ ವೆಂಕಪ್ಪ ಗೌಡ ಕೇನಾಜೆ ಉದ್ಘಾಟಿಸಿ ಮಾತನಾಡಿದರು. ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷ ಪುರುಷೋತ್ತಮ ದಂಬೆಕೋಡಿ ಸಭಾಧ್ಯಕ್ಷತೆ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ Indian Air force officer in , Squadron leader ಶರತ್ ಬಿ ಎಂ ಪಾಲ್ಗೊಂಡು ವಿದ್ಯಾರ್ಥಿಗಳು ಸೈನ್ಯಕ್ಕೆ ಸೇರುವ ಬಗ್ಗೆ ಮಾಹಿತಿ ನೀಡಿದರು.ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಿನ್ನಪ್ಪ ಕಾಣಿಕೆ, ಲಯನ್ಸ್ ಕ್ಲಬ್ ಕೋಶಾಧಿಕಾರಿ ಕರುಣಾಕರ ಎಣ್ಣೆಮಜಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಆನಂದ ಗೌಡ ಜಳಕದಹೊಳೆ ವೇದಿಕೆಗೆ ಆಹ್ವಾನಿಸಿದರು.ಸ್ವಾತಿ ಪ್ರಾರ್ಥಿಸಿದರು. ಪುರುಷೋತ್ತಮ ದಂಬೆಕೋಡಿ ಸ್ವಾಗತಿಸಿ ಶುಭ ಹಾರೈಸಿದರು.ವಾಸುದೇವ ಮೇಲ್ಪಾಡಿ ಅತಿಥಿಗಳ‌ ಪರಿಚಯಿಸಿದರು.ಕರುಣಾಕರ ಎಣ್ಣೆಮಜಲು ವಂದಿಸಿದರು.