ಗುತ್ತಿಗಾರು: ಹಿರಿಯ ವಿದ್ಯಾರ್ಥಿಗಳ, ಪೋಷಕರ ಹಾಗೂ ಸಾರ್ವಜನಿಕರ ಕ್ರೀಡಾಕೂಟ

0

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಹಿರಿಯ ವಿದ್ಯಾರ್ಥಿಗಳ ಹಾಗೂ ಪೋಷಕರ ಮತ್ತು ಸಾರ್ವಜನಿಕರ ಕ್ರೀಡಾಕೂಟ ಇಂದು ನಡೆಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ಕೆ.ಎಂ ಅವರು ಕ್ರೀಡಾಕೂಟ ಉದ್ಘಾಟಿಸಿದರು.

ಸಭಾ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಲೋಕೇಶ್ವರ ಡಿ ಆರ್ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಯು ಮಂಜುನಾಥ ಉಂಞಾನ, ಗ್ರಾ.ಪಂ ಸದಸ್ಯೆ ಲತಾ ಆಜಡ್ಕ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ನೆಲ್ಸನ್‌ ಸ್ವಾಗತಿಸಿ, ಪ್ರಾಂಶುಪಾಲೆ ಚೆನ್ನಮ್ಮ ವಂದಿಸಿದರು. ಶಿಕ್ಷಕಿ ಪ್ರೀತಿ ಕಾರ್ಯಕ್ರಮ ನಿರೂಪಿಸಿದರು.