ಕೆ.ವಿ.ಜಿ. ಸುಳ್ಯ ಹಬ್ಬ ಆರಂಭ

0


ಆಧುನಿಕ ಸುಳ್ಯದ ನಿರ್ಮಾತೃ ದಿ.ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮದಿನದ ಪ್ರಯುಕ್ತ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಹಮ್ಮಿಕೊಳ್ಳುವ ಎರಡು ದಿನಗಳ ಕೆ.ವಿ.ಜಿ. ಸುಳ್ಯ ಹಬ್ಬ ಇಂದು ಶುಭಾರಂಭಗೊಂಡಿತು. ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಎದುರಿನ ಮೈದಾನದಲ್ಲಿ ಅಳವಡಿಸಲಾಗಿರುವ ವೇದಿಕೆಯಲ್ಲಿ ದೇವಸ್ಥಾನದ ಆನುವಂಶಿಕ ಆಡಳ್ತೆ ಮೊಕ್ತೇಸರ ಡಾ. ಹರಪ್ರಸಾದ್ ತುದಿಯಡ್ಕ ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸುಳ್ಯ ಹಬ್ಬ ಸಮಿತಿಯ ಗೌರವಾಧ್ಯಕ್ಷ ಡಾ.ಕೆ.ವಿ.ಚಿದಾನಂದರು ಮುಖ್ಯ ಅತಿಥಿಯಾಗಿದ್ದರು. ನಿವೃತ್ತ ಶಿಕ್ಷಕ ಹಾಗೂ ಹಿರಿಯ ಕ್ರೀಡಾಪಟು ತೋಟ ಸುಭಾಶ್ಚಂದ್ರ ರೈಯವರು ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು.


ಕ್ರೀಡಾ ಸ್ಪರ್ಧಾ ಸಮಿತಿಯ ಸಂಚಾಲಕ ಎ.ಸಿ.ವಸಂತರು ಸ್ವಾಗತಿಸಿದರು. ಸಾಂಸ್ಕೃತಿಕ ಸ್ಪರ್ಧಾ ಸಮಿತಿ ಸಂಚಾಲಕರಾದ ಶ್ರೀಮತಿ ಚಂದ್ರಮತಿ ವಂದಿಸಿದರು. ಚಂದ್ರಶೇಖರ ಪೇರಾಲು ಕಾರ್ಯಕ್ರಮ ನಿರೂಪಿಸಿದರು.