ಎ.ಒ.ಎಲ್.ಇ. ಸ್ಥಾಪಕಾಧ್ಯಕ್ಷ ಡಾ.ಕುರುಂಜಿ ಹುಟ್ಟುಹಬ್ಬ, ಸ್ಥಾಪಕರ ದಿನಾಚರಣೆ, ಕುರುಂಜಿ ಪುತ್ಥಳಿಗೆ ಹಾರಾರ್ಪಣೆ

0

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ರಿ, ಸುಳ್ಯ ಇದರ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ 94ನೇ ಹುಟ್ಟುಹಬ್ಬದ ಅಂಗವಾಗಿ ಕೆ.ವಿ.ಜಿ. ಕ್ಯಾಂಪಸ್ ನಲ್ಲಿರುವ ಡಾ. ಕುರುಂಜಿಯವರ ಪುತ್ಥಳಿಗೆ ಹಾರಾರ್ಪಣೆ ನಡೆಯಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಡಾ. ಕುರುಂಜಿಯವರಿಗೆ ನುಡಿನಮನಗಳನ್ನು ಸಲ್ಲಿಸಿ ಪುತ್ಥಳಿಗೆ ಹಾರಾರ್ಪಣೆ ಮಾಡಿದರು. ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಉಪಾಧ್ಯಕ್ಷೆ ಶ್ರೀಮತಿ ಶೋಭ ಚಿದಾನಂದ, ನಿರ್ದೇಶಕರಾದ ಕೆ.ವಿ. ಹೇಮನಾಥ್, ಜಗದೀಶ್ ಅಡ್ತಲೆ, ಕೆ.ವಿ.ಜಿ. ಸ್ಥಾಪಕರ ದಿನಾಚರಣೆ ಸಮಿತಿ ಅಧ್ಯಕ್ಷ ಡಾ. ಜ್ಞಾನೇಶ್ ಎನ್.ಎ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ಆಡಳಿತಾಧಿಕಾರಿಗಳು, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸ್ಥಾಪಕರ ದಿನಾಚರಣೆ ಸಮಿತಿ ಪ್ರಧಾನ ಕಾರ್ಯದರ್ಶಿ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಎನ್.ಎಂ.ಸಿ. ಪ್ರಾಂಶುಪಾಲರಾದ ರುದ್ರಕುಮಾರ್ ವಂದಿಸಿದರು.