ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ

0

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ 94ನೇ ಹುಟ್ಟು ಹಬ್ಬದ ಪ್ರಯುಕ್ತ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಡಾ. ಸ್ಥಾಪಕರ ದಿನಾಚರಣೆ ಡಿ. 26ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿಯಾಗಿದ್ದ, ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ಸಂಚಾಲಕ ಡಾ. ರೇಣುಕಾಪ್ರಸಾದ್ ಕೆ.ವಿ. ಸಭಾಕಾರ್ಯಕ್ರಮವನ್ನು ಉದ್ಘಾಟಿಸಿದರು.


ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಸಮಿತಿ ಸದಸ್ಯ
ವೆಂಕಟ್ ದಂಬೆಕೋಡಿ ಸಂಸ್ಮರಣಾ ಭಾಷಣ ಮಾಡಿದರು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಮುಖ್ಯ ಅತಿಥಿಗಳಾಗಿದ್ದರು. ಕೆ.ವಿ.ಜಿ. ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಜಯಪ್ರಕಾಶ್ ಕಲ್ಲುಗದ್ದೆ, ಕೆ.ವಿ.ಜಿ. ಐಐಟಿ ಪ್ರಾಂಶುಪಾಲ ಚಿದಾನಂದ ಗೌಡ, ಕೆ.ವಿ.ಜಿ. ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲರಾದ ಅರುಣ್ ಕುಮಾರ್, ಕೆ.ವಿ.ಜಿ ಡೆಂಟಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಮೋಕ್ಷಾ‌ ನಾಯಕ್, ಕೆ.ವಿ.ಜಿ. ಐ.ಟಿ.ಐ. ಭಾಗಮಂಡಲದ ಪ್ರಾಂಶುಪಾಲರಾದ ಶ್ರೀಕಾಂತ್ ಕುಡೆಕಲ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಮರಜ್ಯೋತಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಡಾ.ಯಶೋದಾ ರಾಮಚಂದ್ರ ಪ್ರಾಸ್ತಾವಿಕ ಭಾಷಣಗೈದರು.

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಿಭಾಗ ಮುಖ್ಯಸ್ಥರೂ, ಮುಖ್ಯ ಕಾರ್ಯನಿರ್ವಹಣಾಧಿಕಾರಿಯೂ ಆಗಿರುವ ಡಾ. ಉಜ್ವಲ್ ಯು.ಜೆ ಸ್ವಾಗತಿಸಿದರು. ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಕೃಷ್ಣರಾಜ್ ಕೇರ್ಪಳ ಪ್ರಾರ್ಥಿಸಿದರು. ಕೆ.ವಿ.ಜಿ. ಕೈಗಾರಿಕಾ ತರಬೇತಿ ಸಂಸ್ಥೆಯ ಉಪನ್ಯಾಸಕ ಭವಾನಿಶಂಕರ ಅಡ್ತಲೆ ಮತ್ತು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಅನಿಲ್ ಬಿ.ವಿ ಕಾರ್ಯಕ್ರಮ ನಿರೂಪಿಸಿದರು. 94ನೇ ಹುಟ್ಟುಹಬ್ಬದ ನಿರ್ವಹಣಾಧಿಕಾರಿ, ಕೆ.ವಿ.ಜಿ. ಡೆಂಟಲ್ ಕಾಲೇಜಿನ ಪ್ರೊಫೆಸರ್ ಡಾ. ಮನೋಜ್ ಅಡ್ಡಂತಡ್ಕ ವಂದಿಸಿದರು.