ಅಪರಿಚಿತ ವ್ಯಕ್ತಿಗೆ ಬೈಕ್ ಢಿಕ್ಕಿ : ಸ್ಥಳದಲ್ಲೇ ಮೃತ್ಯು

0

ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೇಟೆಯಲ್ಲಿ ಕೆಲವು ದಿನಗಳಿಂದ ತಿರುಗಾಡುತ್ತಿದ್ದ ಅಪರಿಚಿತ ವ್ಯಕ್ತಿ ಯೊಬ್ಬರು ಇಂದು ಸಂಜೆ ವೇಳೆಗೆ ರಸ್ತೆ ದಾಟುತ್ತಿದ್ದ ಸಮಯ ಬೈಕ್ ಢಿಕ್ಕಿಯಾಗಿ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.

ಈ ವ್ಯಕ್ತಿ‌ ಕಲ್ಲುಗುಂಡಿ ಪೇಟೆಯಲ್ಲಿ ಸುತ್ತಾಡುತ್ತಿದ್ದರೆಂದೂ ಹೇಳಲಾಗುತ್ತಿದೆ.‌ ಅಪಘಾತವಾಗಿ ಸ್ಥಳದಲ್ಲೇ ಆ ವ್ಯಕ್ತಿ ‌ಮೃತಪಟ್ಟಿದ್ದು ದೇಹವನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ತಂದಿರಿಸಲಾಗಿದೆ ಎಂದು ತಿಳಿದುಬಂದಿದೆ.