ಕೆವಿಜಿ ಸುಳ್ಯ ಹಬ್ಬ ಸಮಿತಿ ವತಿಯಿಂದ
ಕೆವಿಜಿ ಸಂಸ್ಮರಣೆ ಮತ್ತು ಸಾಧನಾಶ್ರೀ ಪ್ರಶಸ್ತಿ ಪ್ರದಾನ

0

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಕೆವಿಜಿ ಸಂಸ್ಮರಣೆ ಮತ್ತು ಕೆವಿಜಿ ಸಾಧನಾಶ್ರೀ ಪ್ರಶಸ್ತಿ ಪ್ರದಾನ ಸಮಾರಂಭವು ದ.೨೬ ರಂದು ಸುಳ್ಯದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಮಿತಿಯ ಗೌರವಾಧ್ಯಕ್ಷರಾದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರು ವಹಿಸಿದ್ದರು. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ಕೆ.ವಿ.ರೇಣುಕಾಪ್ರಸಾದ್ ಗೌರವ ಅತಿಥಿಯಾಗಿ ಉಪಸ್ಥಿತರಿದ್ದರು. ರಾಜ್ಯ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಹಾಗೂ ಪ್ರಖ್ಯಾತ ವೈದ್ಯ ಡಾ.ಅಂಜನಪ್ಪ ಕೆವಿಜಿ ಸಂಸ್ಮರಣಾ ಭಾಷಣ ಮಾಡಿದರು.
ಸಮಾರಂಭದಲ್ಲಿ ಹಿರಿಯ ಶಿಕ್ಷಣ ತಜ್ಞರಾದ ನಿವೃತ್ತ ಪ್ರಾಚಾರ್ಯ ಪ್ರೊ.ಎಂ.ಬಾಲಚಂದ್ರ ಗೌಡ ಹಾಗೂ ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆರ್.ಕೆ.ನಾಯರ್ ಅವರನ್ನು ಕೆವಿಜಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಮುಖ್ಯ ಅತಿಥಿ ಡಾ.ಅಂಜನಪ್ಪರವರನ್ನು ಡಾ.ಎನ್.ಎ.ಜ್ಞಾನೇಶ್, ಪ್ರೊ.ಬಾಲಚಂದ್ರ ಗೌಡರನ್ನು ಪ್ರಸನ್ನ ನಿಡ್ಯಮಲೆ, ಡಾ.ಆರ್.ಕೆ.ನಾಯರ್ ಅವರನ್ನು ಹರೀಶ್ ಬಂಟ್ವಾಳ್ ಪರಿಚಯಿಸಿದರು.
ಕೆವಿಜಿ ಸುಳ್ಯ ಹಬ್ಬ ಸಮಿತಿಯಿಂದ ಮನೆ ಪೂರ್ತಿಗೊಳಿಸಲು ನೀಡಲಾದ ೧ ಲಕ್ಷ ರೂ. ದೇಣಿಗೆಯ ಚೆಕ್‌ನ್ನು ಉಬರಡ್ಕದ ಸೂರ್ಯಮನೆ ಅನಂತಕುಮಾರ್‌ರವರಿಗೆ ಹಸ್ತಾಂತರಿಸಲಾಯಿತು. ಕೆವಿಜಿ ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ, ಕಾರ್ಯದರ್ಶಿ ಹರೀಶ್ ಉಬರಡ್ಕ ವಂದಿಸಿದರು. ಕು.ಬೇಬಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.