ಕೇಂದ್ರ ಸಚಿವೆ ಸ್ಮೃತಿ ಇರಾನಿ ಸುಬ್ರಹ್ಮಣ್ಯ ಭೇಟಿ, ದೇವರಿಗೆ ವಿಶೇಷ ಪೂಜೆ ಮಹಾಭಿಷೇಕ ಮಾಡಿಸಿದ ಸಚಿವೆ

0

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ದೇವಸ್ಥಾನದ ವತಿಯಿಂದ ರಾಜಗೋಪುರ ಬಳಿ ಅವರನ್ನು ಸ್ವಾಗತಿಸಲಾಯಿತು.
ದೇವರ ದರ್ಶನ ಪಡೆದ ಬಳಿಕ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರಗಳಾದ ಪ್ರಸನ್ನ ದರ್ಬೆ, ಶ್ರೀವತ್ಸ ಪಿ ಜಿ ಎಸ್ ಎನ್ ಪ್ರಸಾದ್, ಮನೋಹರ ರೈ, ಶೋಭಾ ಗಿರಿಧರ್, ವನಜಾ ಭಟ್, ಲೋಕೇಶ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ಮತ್ತಿತರರು ಉಪಸ್ಥಿತರಿದ್ದರು.