ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಜ.03 ರಿಂದ ಜ.12 ರವರೆಗೆ ವರ್ಷಾವಧಿ ಜಾತ್ರೋತ್ಸವವು ನಡೆಯಲಿದ್ದು ಗೊನೆ ಮುಹೂರ್ತ ಡಿ. 28 ರಂದು ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಸದಸ್ಯರಾದ ಲಿಂಗಪ್ಪ ಗೌಡ ಕೇರ್ಪಳ,ಶ್ರೀಮತಿ ಎಂ.ಮೀನಾಕ್ಷಿ ಗೌಡ,ಎ.ರಮೇಶ ಬೈಪಡಿತ್ತಾಯ, ಎನ್.ಜಯಪ್ರಕಾಶ್ ರೈ ಹಾಗೂ ಕೃಪಾಶಂಕರ ತುದಿಯಡ್ಕ,ವೀರಕೇಸರಿ ಕರಣಿಕರು,ಮೋನಪ್ಪ ಗೌಡ ಕೆರೆಮೂಲೆ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.