ಪಿ.ಎಚ್.ಡಿ. ಅಧ್ಯಯನ : ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನ

0

2022-23 ನೇ ಸಾಲಿಗೆ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಅರ್ಹ ಹೊಸ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ ಫೆಲೋಶಿಪ್‌ಗಾಗಿ ಆನ್‌ಲೈನ್ ಮೂಲಕ ಅರ್ಜಿ ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹೊಸ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಪ್ರವರ್ಗ-೧, ೧೧(ಎ), ೧೧೧(ಎ) ಹಾಗೂ ೧೧೧(ಬಿ) ಗೆ ಸೇರಿದ ಅರ್ಹ ಹೊಸ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ೨೦೨೨-೨೩ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ೧೩-೦೧-೨೦೨೩ ಕ್ಕೆ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ಸೂಚಿಸಿದೆ.
ಅರ್ಜಿಯನ್ನು https://bcwd.karnataka.gov.in ನಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರ ಕಛೇರಿ ದೇವರಾಜ ಅರಸು ಭವನ ಕೊಡಿಯಾಲ್ ಬೈಲ್ ಸುಳ್ಯ ಇವರನ್ನು ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ :೦೮೨೫೭-೨೩೦೬೫೯, ೨೯೫೬೫೯ ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.