ಬೆಳ್ಳಾರೆ ಗ್ರಾಮ ಪಂಚಾಯತ್ ಮಕ್ಕಳ ವಿಶೇಷ ಗ್ರಾಮ ಸಭೆ

0

ಬೆಳ್ಳಾರೆ ಗ್ರಾಮ ಪಂಚಾಯತ್ ಮಕ್ಕಳ ವಿಶೇಷ ಗ್ರಾಮ ಸಭೆಯು ಡಿ.27 ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆಯವರ ಅಧ್ಯಕ್ಷತೆಯಲ್ಲಿ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಕು. ದಿವ್ಯಾಶ್ರೀ ಮಕ್ಕಳ ಹಕ್ಕುಗಳ ಸಂಸ್ಥೆ ಸುಳ್ಯ ರವರು ಮಕ್ಕಳ ಹಕ್ಕುಗಳ ಕುರಿತಾಗಿ ಮಾಹಿತಿ ನೀಡಿದರು, .ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಗೌರಿ ನೆಟ್ಟಾರು, ಪಂಚಾಯತ್ ಸದಸ್ಯರಾದ ದಿನೇಶ್ಚಂದ್ರ ಬಿ ಹೆಗ್ಡೆ, ಅನಿಲ್ ರೈ ಪುಡ್ಕಜೆ , ಎನ್ ಎಸ್ ಡಿ ವಿಠಲ್ ದಾಸ್, ಮಣಿಕಂಠ, ಶ್ರೀಮತಿ ಭವ್ಯ, ಕೆಪಿಎಸ್ ಬೆಳ್ಳಾರೆ, ಹಿ ಪ್ರಾ ಶಾಲೆ ಪಾಟಾಜೆ, ದರ್ಖಾಸ್ತು ಮತ್ತು ನೆಟ್ಟಾರಿನ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.


ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರು, ಶಿಕ್ಷಕರು ಭಾಗವಹಿಸಿದ್ದರು,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ಸ್ವಾಗತಿಸಿ ಕಾರ್ಯಕ್ರಮ ನಡೆಸಿಕೊಟ್ಟರು.ಪಂಚಾಯತ್ ಲೆಕ್ಕ ಸಹಾಯಕರು, ಸಿಬಂದಿಗಳು ಸಹಕರಿಸಿದರು.