ಬೇಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ಪಂಚಾಯತ್ ನಿಂದ ದಂಡ, ತ್ಯಾಜ್ಯ ಎಸೆದವರಿಂದಲೇ ವಿಲೇವಾರಿ ಮಾಡಿಸಿದ ಪಂಚಾಯತ್

0

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಕಾಸರಗೋಡು ನಿವಾಸಿಗಳಿಗೆ ರೂ 2000.00 ದಂಡ ವಿಧಿಸಿದ ಘಟನೆ ಡಿ.29 ರಂದು ನಡೆದಿದೆ. ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ಕಛೇರಿಗೆ ಬರುತ್ತಿರುವ ಸಂದರ್ಭದಲ್ಲಿ ಬೇಂಗಮಲೆ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಪ್ಲಾಸ್ಟಿಕ್ ಚೀಲಗಳನ್ನು ಎಸೆಯುತ್ತಿದ್ದ ಕಾಸರಗೋಡಿನ ವ್ಯಕ್ತಿಗಳಿಗೆ ರೂ 2000.00 ದಂಡ ವಿಧಿಸಿ ತ್ಯಾಜ್ಯ ಎಸೆದವರಿಂದಲೇ ತ್ಯಾಜ್ಯವನ್ನು ವಿಲೇವಾರಿಗೊಳಿಸಲಾಯಿತು.