ಯೇನೆಕಲ್ಲು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಪೋಕ್ಸೋ ಕೇಸು ದಾಖಲು, ಆರೋಪಿಗೆ ನ್ಯಾಯಾಂಗ ಬಂಧನ

0

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆಂಬ ಆರೋಪದಡಿ ಯೇನೆಕಲ್ಲಿನ ಯುವಕನೊಬ್ಬನ ಮೇಲೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯೇನೆಕಲ್ಲಿನ ಆಟೋ ಚಾಲಕ ಜೀವನ್ ಎಂಬ ಯುವಕನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿರುವುದಾಗಿ ತಿಳಿದುಬಂದಿದೆ.