ಕಾಂಗ್ರೆಸ್ ನಾಯಕ ಸುಧೀರ್ ರೈ ಮೇನಾಲ ಅಸ್ವಸ್ಥ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ

0

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಅಕ್ರಮ ಸಕ್ರಮ ಸಮಿತಿ‌ ಮಾಜಿ ಸದಸ್ಯ ಸುಧೀರ್ ರೈ ಮೇನಾಲರು ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ದ.28 ರಂದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಸ್ವಸ್ಥ ಗೊಂಡ ಅವರನ್ನು‌ ವಿಷಯ ತಿಳಿದ ಮನೆಯವರು ಮಧ್ಯಾಹ್ನ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದರು.‌ ಬಳಿಕ ವೈದ್ಯರ ಸಲಹೆಯ ಮೇರೆಗೆ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ತುರ್ತುಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.