ಆಲೆಟ್ಟಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ವಾರ್ಷಿಕೋತ್ಸವ

0

ಸಮಾಜ ಕಲ್ಯಾಣ ಇಲಾಖೆಯಡಿ ಇರುವ ವಾಲ್ಮೀಕಿ ಆಶ್ರಮ ಶಾಲೆ ಆಲೆಟ್ಟಿಯಲ್ಲಿ ವಾರ್ಷಿಕೋತ್ಸವವು ಡಿ.31 ರಂದು ನಡೆಯಿತು .
ಅಧ್ಯಕ್ಷತೆಯನ್ನು ಪೋಷಕರ ಸಂಘದ ಅಧ್ಯಕ್ಷ ಶ್ರೀಧರ ಮಾಣಿಮರ್ಧು ವಹಿಸಿದ್ದರು. ಆಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ಶಿವಾನಂದ ರಂಗತ್ತಮಲೆ ಉದ್ಘಾಟಿಸಿದರು. ವೇದಿಕೆಯಲ್ಲಿ ಆಶ್ರಮ ಶಾಲಾ ಮುಖ್ಯಶಿಕ್ಷಕ ಮಾದವ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಮಮತ, ಶಾಲಾವಿದ್ಯಾಥಿ೯ ನಾಯಕ ಕೌಶಿಕ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಗ್ರಾಮ ಪಂಚಾಯತ್ ವತಿಯಿಂದ ನಡೆದ ಚಿತ್ರ ಕಲೆಯಲ್ಲಿ ಬಾಗವಹಿಸಿ ವಿಜೇತರಾದ ಮಕ್ಕಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್ ಬಹುಮಾನ ವಿತರಿಸಿದರು. ಸಭಾ ಕಾರ್ಯಕ್ರಮದ ನಂತರ ಮಕ್ಕಳ ಪೋಷಕರಿಗೆ ವಿವಿಧ ಅಟೊಟ ಸ್ಪರ್ಧೆಗಳು, ಅಂಗನವಾಡಿ ಪುಟಾಣಿಗಳಿಂದ ಮತ್ತು ಆಶ್ರಮ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾ ಶಿಕ್ಷಕ ವೃಂದದವರು, ಸಿಬ್ಬಂದಿಗಳು,ವಿದ್ಯಾಥಿ೯ಗಳು ,ಪೋಷಕರು ಸಹಕರಿಸಿದರು. ಮುಖ್ಯ ಶಿಕ್ಷಕ ಮಾದವ ಸ್ವಾಗತಿಸಿದರು. ಶಿಕ್ಷಕಿ ಹೇಮಲತಾ ವಂದಿಸಿದರು. ಶಿಕ್ಷಕಿ ಶ್ರೀಮತಿ ಗೀತಾ ಕಾರ್ಯಕ್ರಮ ನಿರೂಪಿಸಿದರು.