ಕಲ್ಲುಗುಂಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

0

ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪಾಜೆ ಗ್ರಾಮದ ಕಲ್ಲುಗುಂಡಿಯಿಂದ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ದಿ. ಬಾಬು ಡಿಸೋಜಾ ಅವರ ಪುತ್ರ ಡೆನಿಸ್ (೫೧ ವರ್ಷ) ಎಂದು ಗುರುತಿಸಲಾಗಿದೆ. ಡೆನಿಸ್‌ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.


ಸಾವಿಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ಹೇಳಲಾಗುತ್ತಿದ್ದು, ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಕಲ್ಲುಗುಂಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.