ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

0

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಮ್ಮಾಜೆ, ಕಲ್ಲಬೆಟ್ಟು, ನೆಲ್ಲಿತೀರ್ಥ, ಗುರುಪುರ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ, ಪುಂಜಾಲಕಟ್ಟೆ, ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಮೊರಾರ್ಜಿ ದೇಸಾಯಿ/ಡಾ| ಬಿ.ಆರ್ ಅಂಬೇಡ್ಕರ್ ಶ್ರೀಮತಿ ಇಂದಿರಾ ಗಾಂಧಿ, ಶ್ರೀ ನಾರಾಯಣ ಗುರು, ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆಯನ್ನು ದಿನಾಂಕ 05-01-2023 ರಿಂದ ಆರಂಭಿಸಲಾಗುವುದು.

ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೇ ಊಟ, ವಸತಿ, ಸಮವಸ್ತ್ರ, ಪಠ್ಯ ಪುಸ್ತಕ ಹಾಗೂ ಇನ್ನಿತರ ಸಮಾಗ್ರಿಗಳನ್ನು ನೀಡಲಾಗುವುದು, ಅಭ್ಯರ್ಥಿಯು ತನ್ನ ಎಸ್‌.ಎ.ಟಿ.ಎಸ್ ಸಂಖ್ಯೆ 1 ಇತ್ತೀಚಿನ 2 ಭಾವಚಿತ್ರ, ಜಾತಿ/ಆದಾಯ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್‌ ಜೆರಾಕ್ಸ್ ಪ್ರತಿಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ, ವಸತಿ ಶಾಲೆಯಲ್ಲಿಯೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22-01-2023 ಹಾಗೂ ಪರೀಕ್ಷಾ ದಿನಾಂಕ 12-03-2023, ಭಾನುವಾರ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು.

ದೂರವಾಣಿ : 9164063223, 9008394660, 9481759917