ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನೆ

0

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನಾ ಸಮಾರಂಭ ಮಂಗಳವಾರ ಶಾಲಾ ಕ್ರೀಡಾಂಗಣ ದಲ್ಲಿ ನಡೆಯಿತು.
ಕ್ರೀಡಾಕೂಟ ವನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ದೀಪಬೆಳಗಿಸಿ ಉದ್ಘಾಟಿಸಿದರು.
ಶಾಲಾ ಸಂಚಾಲಕ ಜಾಕೆ ಸದಾನಂದ ಗೌಡ, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ಕತ್ತಾರ್ ಇಬ್ರಾಹಿಂ, ಖಜಾಂಜಿ ಶ್ರೀನಿವಾಸ ಭಟ್, ಜತೆ ಕಾರ್ಯದರ್ಶಿ ಶ್ಯಾಂಕುಮಾರ್, ನಿರ್ದೇಶಕ ಜಯರಾಮ ರೈ ಅತಿಥಿಗಳಾಗಿ ಭಾಗವಹಿಸಿದರು.
ಶಾಲಾ ಮುಖ್ಯ ಶಿಕ್ಷಕಿ ಕುಸುಮಾವತಿ ಯು.ಪಿ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಶಿಕ್ಷಕ ಶಿವಪ್ರಕಾಶ .ಕೆ ವಂದಿಸಿದರು. ಶಿಕ್ಷಕ ವೃಂದ, ಬೋಧಕೇತರ ವೃಂದ, ಪೋಷಕ ವೃಂದ ಭಾಗವಹಿಸಿದರು.