ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ದ.ಕ.ಜಿಲ್ಲಾ ಸಮ್ಮೇಳನದಲ್ಲಿ ಗೌರವಾರ್ಪಣೆ

0

ಮಂಗಳೂರಿನ ಕೆದ್ಮಾಲ್ ರಂಗರಾವ್ ಪುರಭವನದಲ್ಲಿ ಇಂದು ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಜಿಲ್ಲಾ ಸಮ್ಮೇಳನ ‘ಸಾಧನ ಸಂಭ್ರಮ-2023’ ದಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘವನ್ನು ಗೌರವಿಸಲಾಯಿತು.

ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಸುಳ್ಯ ತಾಲೂಕು ಪತ್ರಕರ್ತರ ಸಂಘದ ಪರವಾಗಿ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿಯವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಇಂದಾಜೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸುಳ್ಯ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ, ಉಪಾಧ್ಯಕ್ಷ ಸತೀಶ್ ಹೊದ್ದೆಟ್ಟಿ, ಜಿಲ್ಲಾ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಪದಾಧಿಕಾರಿಗಳಾದ ಗಂಗಾಧರ ಮಟ್ಟಿ, ದುರ್ಗಾಕುಮಾರ್ ನಾಯರ್ ಕೆರೆ, ಕೃಷ್ಣ ಬೆಟ್ಟ, ತೇಜೇಶ್ವರ ಕುಂದಲ್ಪಾಡಿ, ಲೋಕೇಶ್ ಪೆರ್ಲಂಪಾಡಿ, ಮುರಳೀಧರ ಅಡ್ಡನಪಾರೆ, ಹಸೈನಾರ್ ಜಯನಗರ, ಪದ್ಮನಾಭ ಮುಂಡೋಕಜೆ, ಪದ್ಮನಾಭ ಅರಂಬೂರು, ಪ್ರಜ್ಞಾ ಎಸ್. ನಾರಾಯಣ್ ಉಪಸ್ಥಿತರಿದ್ದರು.