ದೇವರಕಾನ – ಟಪ್ಪಾಲುಕಟ್ಟೆ ರಸ್ತೆ ಅಭಿವೃದ್ಧಿಗೆ ಸಚಿವರಿಂದ ಗುದ್ದಲಿ ಪೂಜೆ

0

ದೇವರಕಾನ -ಟಪ್ಪಾಲುಕಟ್ಟೆ ರಸ್ತೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ರೂ. 10 ಶಾಸಕರ ವಿಶೇಷ ಅನುದಾನದಲ್ಲಿ ರೂ. 30ಲಕ್ಷ ವೆಚ್ಚದಲ್ಲಿ ನಡೆಯಲಿರುವ ಅಭಿವೃದ್ಧಿ ಕಾರ್ಯಕ್ಕೆ ಸಚಿವ ಎಸ್. ಅಂಗಾರ ಜ. 2ರಂದು ಗುದ್ದಲಿ ಪೂಜೆ ನೆರವೇರಿಸಿದರು.
ಬಾಳಿಲ ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಸವಿತಾಗುರುರಾಜ್, ಸದಸ್ಯ ರವೀಂದ್ರ ರೈ ಟಪ್ಪಾಲುಕಟ್ಟೆ, ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ ತೀರ್ಥರಾಮ, ಬಿಜೆಪಿ‌ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಾರ್ಯದರ್ಶಿ ಶ್ರೀನಾಥ್ ರೈ ದೋಳ್ತೋಡಿ, ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಜಾಹ್ನವಿ ಕಾಂಚೋಡು, ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಧಾರ್ಮಿಕ ಮುಖಂಡ ವಸಂತ ನಡುಬೈಲು, ದೇವರಕಾನ‌ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಡಾ.ರಾಮಚಂದ್ರ ಭಟ್ ದೇವಸ್ಯ ಸೇರಿದಂತೆ ರಸ್ತೆಯ ಫಲಾನುಭವಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.