ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ

0

ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ೨೦೨೨-೨೩ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜ.೬ ರಂದು ನೆರವೇರಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷರಾದ ಡಾ.ಕೆ.ವಿ. ಚಿದಾನಂದರು ವಹಿಸಿದ್ದರು. ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕ ನಟರಾಜನ್ ಮುಖ್ಯ ಅತಿಥಿಗಳಾಗಿದ್ದು, ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಉದಯಕೃಷ್ಣ. ಬಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಉಪನ್ಯಾಸಕಿ ಟೀನಾ ಹೆಚ್.ಎಸ್. ಮತ್ತು ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಟೀನಾ.ಹೆಚ್. ಎಸ್ ಪ್ರಮಾಣವಚನ ಬೋಧಿಸಿದರು. ವಿದ್ಯಾರ್ಥಿನಿ ಶುತಿ ರಾಧಾಕಷ್ಣನ್ ಪ್ರಾರ್ಥಿಸಿದರು.

ಪ್ರಾಂಶುಪಾಲರಾದ ಪ್ರೊ. ಉದಯಕೃಷ್ಣ. ಬಿ, ಸ್ವಾಗತಿಸಿ, ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ಮಿಲನ್.ಬಿ.ಕೆ ವಂದಿಸಿದರು. ಉಪನ್ಯಾಸಕಿ ಉಷಾ ಸಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.