ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯ ಶಿಶುಮಂದಿರದ ನೂತನ ಕಟ್ಟಡ ಲೋಕಾರ್ಪಣೆ ಹಾಗೂ ಶಾಲಾ ವಾರ್ಷಿಕೋತ್ಸವ

0

ಶಿಶುಮಂದಿರಗಳಿಂದ ಮೌಲ್ಯಯುತ ಶಿಕ್ಷಣ : ಸಚಿವ ಎಸ್. ಅಂಗಾರ

ಜಾತ್ಯಾತೀತ ರಾಷ್ಟ್ರದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಸರಕಾರಿ ಶಾಲೆಗೂ, ಖಾಸಗಿ ಶಾಲೆಗೂ ಬೇರೆ ಬೇರೆ ರೀತಿ ನೀತಿಗಳಿವೆ. ಶಿಶುಮಂದಿರದಲ್ಲಿ ಮಕ್ಕಳಿಗೆ ಸಂಸ್ಕಾರಯುತ ಹಾಗೂ ಮೌಲ್ಯಯುತ ಶಿಕ್ಷಣ ದೊರೆಯುತ್ತದೆ ಎಂದು ರಾಜ್ಯ ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರು ಹೇಳಿದರು.

ಅವರು ಜಾಲ್ಸೂರು ಗ್ರಾಮದ ಅಡ್ಕಾರು ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ಶಿಶುಮಂದಿರದ ನೂತನ “ಅಪ್ರಮೇಯ” ಕಟ್ಟಡವನ್ನು ಜ.7ರಂದು ಬೆಳಿಗ್ಗೆ ಲೋಕಾರ್ಪಣೆಗೊಳಿಸಿ, ಮಾತನಾಡಿದರು.


ತಹಶಿಲ್ದಾರ್ ಕು. ಅನಿತಾಲಕ್ಷ್ಮಿ ಅವರು ಧ್ವಜಾರೋಹಣ ನೆರವೇರಿಸಿದರು.
ಶಾಲಾ ವಾರ್ಷಿಕೋತ್ಸವನ್ನು ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ ಅವರು ಉದ್ಘಾಟಿಸಿ, ಮಕ್ಕಳಿಗೆ ಶಿಸ್ತು, ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಶಿಕ್ಷಕ ಹಾಗೂ ಪೋಷಕರ ಪಾತ್ರ ಮುಖ್ಯವಾದದು ಎಂದು ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ಶ್ರೀಮತಿ ರೂಪಲೇಖ , ಜಾಲ್ಸೂರು ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ವಿದ್ಯಾಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಉಪೇಂದ್ರ ಕಾಮತ್ ವಿನೋಬನಗರ, ಸಂಚಾಲಕರಾದ ಸುಧಾಕರ ಕಾಮತ್ ವಿನೋಬನಗರ, ವಿದ್ಯಾಸಂಸ್ಥೆಯ ಗೌರವ ಸಲಹೆಗಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ಪ್ರಾಂತ್ಯ ಸಹಸೇವಾ ಪ್ರಮುಖ್ ನ. ಸೀತಾರಾಮ, ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎನ್. ಗೋಪಾಲರಾವ್, ವಿದ್ಯಾಸಂಸ್ಥೆಯ ಎಸ್.ಡಿ.ಎಂ.ಸಿ. ಪದಾಧಿಕಾರಿಗಳಾದ ಉಮೇಶ್ ಹುಲಿಮನೆ, ಸೌಮ್ಯ ಕದಿಕಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶ್ಯಾಮ್ ಪ್ರಸಾದ್ ಅಡ್ಡಂತಡ್ಕ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ವಂದಿಸಿದರು.