ಮಂಗಳೂರು ಕಾವೂರು ಶಾಖಾ ಮಠದ ಡಾ. ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಬಳ್ಪ ಗ್ರಾಮಕ್ಕೆ ಭೇಟಿ

0


ಪುತ್ತೂರು ತಾಲೂಕಿನಲ್ಲಿ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ೭೮ ನೇ ಜಯಂತ್ಯೋತ್ಸವ ಸಂಸ್ಮರಣೆ ಹಾಗೂ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ದಶಮಾನೋತ್ಸವದ ಹಾಗೂ ರಜತ ತುಲಾಭಾರ ಜ. ೨೨ ರಂದು ಪುತ್ತೂರಿನ ಮಹಾಲಿಂಗೇಶ್ವರ ದೇವಾಸ್ಥಾನದ ಬೈಲಿನಲ್ಲಿ ನಡೆಯಲಿದ್ದು ಇದರ ಅಂಗವಾಗಿ ಜ. ೦೭ರಂದು ಮಂಗಳೂರು ಕಾವೂರು ಶಾಖಾ ಮಠದ ಡಾ. ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಕಡಬ ತಾಲೂಕಿನ ಕಾಂಚಿ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಬೀದಿಗುಡ್ಡೆ, ಬಳ್ಪ ಗ್ರಾಮಕ್ಕೆ ಭೇಟಿ ನೀಡಿದರು.
ಬಳಿಕ ಶ್ರೀ ಭಾರತಿ ತೀರ್ಥ ಸಭಾಂಗಣದಲ್ಲಿ ಜಯಂತ್ಯೋತ್ಸವ ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆ ನಡೆಸಲಾಯಿತು.