ಆಲೆಟ್ಟಿ: ಸದಾಶಿವ ದೇವಸ್ಥಾನದ ಕಾಂಕ್ರೀಟ್ ರಸ್ತೆಯ ಉದ್ಘಾಟನೆ

0

ಆಲೆಟ್ಟಿ ಸದಾಶಿವ ದೇವಸ್ಥಾನಕ್ಕೆ ಹಾಗೂ ಪಂಚಾಯತ್ ಕಡೆಗೆ ಸಂಚರಿಸುವ ರಸ್ತೆಯು ಸಂಪೂರ್ಣ ಕಾಂಕ್ರೀಟಿಕರಣ ಗೊಂಡಿದ್ದು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಕುಡೆಕಲ್ಲು ಜ.7 ರಂದು ಉದ್ಘಾಟಿಸಿ ಸಂಚಾರಕ್ಕೆ ಮುಕ್ತ ಗೊಳಿಸಿದರು.


ಆಲೆಟ್ಟಿ ಪಂಚಾಯತ್ ಮತ್ತು ಎ.ಪಿ.ಎಂ.ಸಿ ವತಿಯಿಂದ ಅನುದಾನ ಒದಗಿಸಿದ್ದು ಹದಗೆಟ್ಟ ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸಲಾಗಿದೆ.
ಈ ಸಂದರ್ಭದಲ್ಲಿ ಎ.ಪಿ.ಎಂ.ಸಿ.ನಿರ್ದೇಶಕ ಜಯಪ್ರಕಾಶ್ ಕುಂಚಡ್ಕ, ಆಲೆಟ್ಟಿ ಸೊಸೈಟಿ ಅಧ್ಯಕ್ಷ ಸುಧಾಕರ ಆಲೆಟ್ಟಿ, ಆಲೆಟ್ಟಿ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಮಾಜಿ ಅಧ್ಯಕ್ಷ ಪ್ರಸನ್ನ ಕೆ.ಸಿ ಬಡ್ಡಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಕಾರ್ಯದರ್ಶಿ ಕೃಪಾಶಂಕರ ತುದಿಯಡ್ಕ, ಕುಡೆಕಲ್ಲು ಮಹಮ್ಮಾಯಿ ದೇವಸ್ಥಾನದ ಜೀ.ಸ.ಅಧ್ಯಕ್ಷ ವಾಸುದೇವ ಗೌಡ ಕುಡೆಕಲ್ಲು, ಪಂಚಾಯತ್ ಸದಸ್ಯರಾದ ಸತ್ಯಕುಮಾರ್ ಆಡಿಂಜ,ಧರ್ಮಪಾಲ ಕೊಯಿಂಗಾಜೆ,ಸುದೇಶ್ ಅರಂಬೂರು, ಶಿವಾನಂದ ರಂಗತ್ತಮಲೆ,ರತೀಶನ್ ಅರಂಬೂರು,
ಶ್ರೀಮತಿ ವೀಣಾವಸಂತ ಆಲೆಟ್ಟಿ, ಸದಾಶಿವ ಭಜನಾ ಸಂಘದ ಅಧ್ಯಕ್ಷ ಅಚ್ಚುತ ಮಣಿಯಾಣಿ ಆಲೆಟ್ಟಿ,
ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸುಂದರಿ ಮೊರಂಗಲ್ಲು, ಸೊಸೈಟಿ ನಿರ್ದೇಶಕಿ ಶ್ರೀಮತಿ ವೇದಾವತಿ ಸಣ್ಣಯ್ಯ, ಪಿ.ಡಿ.ಒ ಕೀರ್ತಿ ಪ್ರಸಾದ್, ಕಾರ್ಯದರ್ಶಿ ಸೃಜನ್ ಎ.ಜಿ,ಸೇವಾ ಸಮಿತಿ ಕಾರ್ಯದರ್ಶಿ ರಾಮಚಂದ್ರ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಗ್ರಾಮದ ನಾಗರಿಕರು ಭಾಗವಹಿಸಿದರು. ಪಂಚಾಯತ್ ಸಿಬ್ಬಂದಿ ವರ್ಗದವರು ಸಹಕರಿಸಿದರು.