*ರಾಜ್ಯದ ಅಭಿವೃದ್ಧಿಯಲ್ಲಿ ಗೌಡ ಸಮಾಜದ ಪಾತ್ರ ಮಹತ್ತರವಾದದ್ದು : ಡಾ. ರೇಣುಕಾ ಪ್ರಸಾದ್ ಕೆ ವಿ*

0

ಕರ್ನಾಟಕ ರಾಜ್ಯದ ಅಭಿವೃದ್ಧಿಯಲ್ಲಿ ಗೌಡ ಜನಾಂಗದ ಪಾತ್ರ ಮಹತ್ತರವಾದದ್ದು ರಾಜಕೀಯ ಧಾರ್ಮಿಕ ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಗೌಡ ಜನಾಂಗದ ನಾಯಕರು ಮುಂದಾಳತ್ವ ವಹಿಸಿಕೊಂಡು ರಾಜ್ಯದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ್ದಾರೆ ಎಂದು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ. ವಿ ಅಭಿಪ್ರಾಯಪಟ್ಟರು ಅವರು ಜನವರಿ ೮ ರಂದು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ (ರಿ) ಬೆಂಗಳೂರು ಇದರ ಆಶ್ರಯದಲ್ಲಿ ನಡೆದ ಸ್ನೇಹ ಸಮ್ಮಿಲನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇಂದು ಬೆಂಗಳೂರು ಇ? ಅಭಿವೃದ್ಧಿ ಹೊಂದಿ ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗುವಲ್ಲಿ ಗೌಡ ಸಮಾಜದ ನಾಯಕರ ಮುಂದಾಳತ್ವ ಬಹಳ ಮುಖ್ಯವಾಗಿದೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕಕ್ಷೇತ್ರದಲ್ಲಿ ಗೌಡ ಸಮಾಜದ ನಾಯಕರು ನಾಯಕತ್ವವನ್ನು ವಹಿಸಿಕೊಂಡು ತನ್ನದೇ ರೀತಿಯ ಕೊಡುಗೆ ನೀಡಿದ್ದಾರೆ. ದೇಶದ ಆಡಳಿತ ಚುಕ್ಕಾಣಿಯಿಂದ ಹಿಡಿದು ರಾಜ್ಯದ ಆಡಳಿತ ಚುಕ್ಕಾಣಿಯನ್ನು ಕೂಡ ಗೌಡ ಸಮಾಜದವರು ನಿರ್ವಹಿಸಿರುತ್ತಾರೆ. ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದವರು ರಾಜ್ಯದ ರಾಜಧಾನಿಯಲ್ಲಿ ಒಂದಾಗಿ ಸೇರಿಕೊಂಡು ಒಂದು ಗಟ್ಟಿ ಸಂಘಟನೆಯನ್ನು ಮಾಡಿಕೊಂಡು ಸಮಾಜದ ಸಾಧಕರನ್ನು ಗುರುತಿಸಿ ಅವರ ಪ್ರತಿಭೆಗೆ ಪ್ರೋತ್ಸಾಹ ನೀಡಿ ಅವರನ್ನು ಸನ್ಮಾನಿಸಿ ಗೌರವಿಸುವ ಕಾರ್ಯ ಶ್ಲಾಘನೀಯ, ಇಂತಹ ಕಾರ್ಯಗಳು ಇನ್ನಷ್ಟು ಮುಂದುವರಿಯಲಿ ಎಂದು ಶುಭ ಹಾರೈಸಿದರು.ಕಾರ್ಯಕ್ರಮದ ವೇದಿಕೆಯಲ್ಲಿ ಸಂಘದ ಅಧ್ಯಕ್ಷ ರವೀಂದ್ರನಾಥ ಕೇವಳ, ದಾಸರಹಳ್ಳಿ ಕ್ಷೇತ್ರದ ಶಾಸಕರಾದ ಆರ್. ಮಂಜುನಾಥ ಮತ್ತು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.