ಬೆಳ್ಳಾರೆ ಸ.ಪ್ರ.ದ.ಕಾಲೇಜು ಗ್ರಂಥಾಲಯ ಕಟ್ಟಡ ಉದ್ಘಾಟನೆ

0

ಜ್ಞಾನದ ವಿಸ್ತರಣೆಗೆ ಓದು ಪೂರಕ: ಸುನಿಲ್ ಕುಮಾರ್

ಪುಸ್ತಕಗಳನ್ನು ಓದುವುದರಿಂದ ಜ್ಞಾನದ ವಿಸ್ತರಣೆ ಸಾಧ್ಯ. ನಾವು ಓದುವುದನ್ನು ಬೆಳೆಸಿಕೊಂಡಲ್ಲಿ ನಮ್ಮ ಸಾಮಾನ್ಯ ಜ್ಞಾನ ಹಚ್ಚಿಸಬಹುದು. ಇದಕ್ಕೆ ಗ್ರಂಥಾಲಯ ಪೂರಕವಾಗಲಿದೆ. ಮಕ್ಕಳು ಗ್ರಂಥಾಲಯವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ಅವರು ಬೆಳ್ಳಾರೆಯ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 1.30 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಗ್ರಂಥಾಲಯ ಕಟ್ಟಡವನ್ನು ಜ.10 ರಂದು ಉದ್ಘಾಟಿಸಿ ಮಾತನಾಡುತ್ತಿದ್ದರು. ಸರಕಾರ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ತಂದಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಸಾಧಕರ ಬಗ್ಗೆ ತಿಳಿಯಲು ಅವರ ಜೀವನ ಅನುಸರಿಸಲು ಪುಸ್ತಕ ಓದಿ ತಿಳಿಯಬಹುದಾಗಿದೆ ಎಂದರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಮೀನುಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಎ.ವಿ.ತೀರ್ಥರಾಮ, ಪೆರುವಾಜೆ ಗ್ರಾ.ಪಂ. ಅಧ್ಯಕ್ಷ ಜಗನ್ನಾಥ ಪೂಜಾರಿ, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ, ಕಾಲೇಜು ಅಭಿವೃದ್ಧಿ ಸಮಿತಿಯ ಪದ್ಮನಾಭ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲ ದಾಮೋದರ ಕಣಜಾಲು ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಡಾ.ಲೋಕೇಶ್ ವಂದಿಸಿದರು. ಕಿರಣ್ ಗುಡ್ಡೆಮನೆ ಕಾರ್ಯಕ್ರಮ ನಿರೂಪಿಸಿದರು.