ಜ.18 : ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ಉದ್ಘಾಟನೆ

0

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ 2020-21 ನೇ ಸಾಲಿನ ಕೆಪಿಎಸ್ ಮೂಲಭೂತ ಸೌಕರ್ಯಕ್ಕಾಗಿ ರೂ.200 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಜ.18 ರಂದು ನಡೆಯಲಿದೆ. ಪ್ರೌಢಶಾಲಾ ನೂತನ‌ ಕಟ್ಟಡವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ.
ಪ್ರಾಥಮಿಕ ಶಾಲಾ ನೂತನ ಕಟ್ಟಡವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ ಉದ್ಘಾಟಿಸಲಿದ್ದಾರೆ.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ರಾಜ್ಯ ಸಭೆ ಸಂಸದರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಘನ ಉಪಸ್ಥಿತರಾಗಿ ಇರಲಿದ್ದಾರೆ. ಹಾಗೂ ಕಾರ್ಯಕ್ರಮದಲ್ಲಿ ಹಲವಾರು ಜನ ಗಣ್ಯರು ಉಪಸ್ಥಿತರಿರುವರು.