ಜ.31 ರಿಂದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ಸಿದ್ಧತಾ ಸಭೆಗಳು

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜನವರಿ 31ರಿಂದ ಫೆಬ್ರವರಿ 9ರ ತನಕ ಶ್ರೀದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ದೇಲಂಪಾಡಿ ಗಣೇಶ ತಂತ್ರಿಯವರ ಮಾರ್ಗದರ್ಶನದಲ್ಲಿ ಜರುಗಲಿದೆ. ಆ ಪ್ರಯುಕ್ತ ಪ್ರಚಾರ ಸಮಿತಿಯ ಸಭೆಯು ಇಂದು ಕಾಯರ್ತೋಡಿ ದೇವಸ್ಥಾನದ ವಠಾರದಲ್ಲಿ ನಡೆಯಿತು.


ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್‌ರವರು ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಎ.ಟಿ. ಕುಸುಮಾದರ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಕೆ. ಉಮೇಶ್, ವ್ಯವಸ್ಥಾಪನಾ ಸಮಿತಿ ಸದಸ್ಯ ಕೃಷ್ಣ ಬೆಟ್ಟ ವೇದಿಕೆಯಲ್ಲಿದ್ದರು.ಕಾರ್ಯಕ್ರಮ ಯಶಸ್ಸಿಗಾಗಿ ದೇವಸ್ಥಾನದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ನಿರಂತರ ಸಭೆಗಳು ನಡೆಸಲಾಗುತ್ತಿದೆ.
ದೇವಸ್ಥಾನದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದ್ದು ಈಗಾಗಲೇ ದೇವಸ್ಥಾನದ ಉತ್ತರ ಮತ್ತು ಪಶ್ಚಿಮ ಭಾಗದಲ್ಲಿ ಹೊರಾಂಗಣ ಮಾಡಿನ ಕೆಲಸಗಳು ನಡೆದಿದೆ.
ಭೋಜನ ಶಾಲೆ ಇನ್ನಿತರ ಚಪ್ಪರದ ಕೆಲಸಗಳು ಶ್ರಮದಾನದ ಮೂಲಕ ನಡೆಯುತ್ತಿದೆ. ಊರಿನ ಸಂಘ ಸಂಸ್ಥೆಗಳು ಶ್ರಮದಾನದಲ್ಲಿ ಭಾಗವಹಿಸುತ್ತಿದ್ದಾರೆ.