ವಿವೇಕ ರಥ ಯುವ ಪಥ-ಯುವ ಜಾಗೃತಿ ಜಾಥಾ ಸುಳ್ಯಕ್ಕೆ ಆಗಮನ

0

ಸಚಿವ ಎಸ್.ಅಂಗಾರರಿಂದ ಸ್ವಾಗತ

ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ ,ದ.ಕ.ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ,ಜಿಲ್ಲಾ ಯುವಜನ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾದ್ಯಂತ ಸಂಚರಿಸುವ
ವಿವೇಕ ರಥ ಯುವ ಪಥ-ಯುವ ಜಾಗೃತಿ ಜಾಥಾ ಇಂದು ಸುಳ್ಯಕ್ಕೆ ಆಗಮಿಸಿತು.

ಜಾಥಾ ಪೈಚಾರ್ ಮೂಲಕ ಸುಳ್ಯದ ಪ್ರವೇಶ ಪಡೆಯುತ್ತಿದ್ದಂತೆ ಸಚಿವ ಎಸ್.ಅಂಗಾರರ ನೇತೃತ್ವದಲ್ಲಿ ಸ್ವಾಗತ ಕೋರಲಾಯಿತು. ಬಳಿಕ ವಿವೇಕಾ ರಥವನ್ನು ಸುಳ್ಯದ ಯುವಜನ ಸಂಯುಕ್ತ ಮಂಡಳಿ ವಠಾರಕ್ಕೆ ಬರಮಾಡಿಕೊಳ್ಳಲಾಯಿತು. ಅಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ತೇಜಸ್ವಿ ಕಡಪಳ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.


ಕರ್ಲಪ್ಪಾಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಶೆಟ್ಟಿ ಮೇನಾಲ ಮುಖ್ಯ ಭಾಷಣಗಾರರಾಗಿದ್ದರು.