ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ

0

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಶಾಲಾ ವಾರ್ಷಿಕ ಕ್ರೀಡಾಕೂಟವು ಜ.14 ರಂದು ನಡೆಯಿತು. ಕ್ರೀಡಾಕೂಟದ ಧ್ವಜಾರೋಹಣವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತಿನ ಪ್ರಭಾರ ಪಿಡಿಒ ಮೋನಪ್ಪ ಡಿ ರವರು ನೆರವೇರಿಸಿದರು. ಕ್ರೀಡಾಕೂಟವನ್ನು ಶಶಿಧರ್ ಬಿಳಿನೆಲೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್ ವಹಿಸಿದ್ದರು, ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಚಂದ್ರಶೇಖರ ನಾಯರ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ, ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂಕೀರ್ತ್ ಹೆಬ್ಬಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಕ್ರೀಡಾ ವಿಧಿಯನ್ನು ಶಾಲಾ ನಾಯಕ ಕಾರ್ತಿಕ್ ಭಟ್ ಬೋಧಿಸಿದರು. ವಿದ್ಯಾರ್ಥಿಗಳ ಆಕರ್ಷಕ ಪತಸಂಚಲನದ ನಂತರ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು..